ADVERTISEMENT

`ಯುವಕರು ಸಮಾಜಮುಖಿ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2012, 20:54 IST
Last Updated 2 ಡಿಸೆಂಬರ್ 2012, 20:54 IST

ಬೆಂಗಳೂರು: ಹನುಮಂತನಗರದಲ್ಲಿ ಭಾನುವಾರ ಕರ್ನಾಟಕ ಯುವ ಚೇತನ ಬಳಗ ಸಂಸ್ಥೆಯನ್ನು ಉದ್ಘಾಟಿಸಲಾಯಿತು. ಇದೇ ಸಂದರ್ಭದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಅಧಿಕ ಮಂದಿ ರಕ್ತವನ್ನು ದಾನ ಮಾಡಿದರು. ನಲ್ವತ್ತು ಮಂದಿ ನೇತ್ರದಾನಕ್ಕೆ ಒಪ್ಪಿಗೆ ಸೂಚಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಜಮೀರ್ ಅಹಮ್ಮದ್, `ಒಂದು ಸಂಸ್ಥೆ ಅಸ್ತಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಜನಪರ ಚಟುವಟಿಕೆಗಳನ್ನು ಹಮ್ಮಿಕೊಂಡು, ನಂತರ ಆ ಪ್ರಕ್ರಿಯೆಯನ್ನು ಕೈಬಿಡುತ್ತದೆ. ಆದರೆ ಚೇತನ ಬಳಗವು ಈ ನಡೆಯನ್ನು ಅನುಸರಿಸಬಾರದು' ಎಂದು ಸಲಹೆ ನೀಡಿದರು.

`ಯುವಕರು ಉದಾತ್ತ ಚಿಂತನೆಗಳನ್ನು ಇಟ್ಟುಕೊಂಡು ಸಮಾಜಮುಖಿಯಾಗುವ ನಿಟ್ಟಿನಲ್ಲಿ ಸಂಘಟಿತರಾಗಬೇಕು. ಕೇವಲ ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿ ಮಾತ್ರವಲ್ಲದೇ ಸಾಮಾಜಿಕ ಕಳಕಳಿಯನ್ನು ಹೊಂದಿರುವ ಯುವಪಡೆಯನ್ನು ರಚಿಸುವತ್ತ ಗಂಭೀರ ಚಿಂತನೆ ಅಗತ್ಯ' ಎಂದು ಹೇಳಿದರು.ಬಸವನಗುಡಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಭಾಗೇಗೌಡ, ಪಾಲಿಕೆ ಮಾಜಿ  ಸದಸ್ಯ ಚಂದ್ರಶೇಖರ್ ಇತರರು ಉಪಸ್ಥಿತರಿದ್ದರು.
 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.