ಬೆಂಗಳೂರು: `ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ಯುವ ಜನಾಂಗ ಮಾತ್ರ ಶಕ್ತವಾಗಿದ್ದು, ಈ ನಿಟ್ಟಿನಲ್ಲಿ ಸಾಂಸ್ಕೃತಿಕ ಮತ್ತು ಸಾಮಾಜಿಕವಾಗಿ ಇನ್ನಷ್ಟು ಬಲಗೊಳ್ಳಬೇಕಿದೆ~ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಅಭಿಪ್ರಾಯಪಟ್ಟರು.
ವಿಶ್ವ ಚೇತನ ಯುವ ವೇದಿಕೆಯು ನಗರದ ಸಂಸ ಬಯಲು ರಂಗ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಯುವ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಜನಪದ ಗಾಯಕ ಜೋಗಿಲ ಸಿದ್ಧರಾಜು ಮತ್ತು ಶಂಕರ ಭಾರತೀಪುರ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ನೃತ್ಯ ದಿಶಾ ಕಲಾ ಮತ್ತು ಸಂಸ್ಕೃತಿ ಕೇಂದ್ರದ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕಾ.ತ.ಚಿಕ್ಕಣ್ಣ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.