ಕೃಷ್ಣರಾಜಪುರ: `ವಿದ್ಯಾವಂತ ಯುವಕರು ವಿದೇಶಿ ವ್ಯಾಮೋಹ ಕೈಬಿಟ್ಟು ಸ್ವದೇಶ ಪ್ರೇಮ ಬೆಳೆಸಿಕೊಳ್ಳಬೇಕು~ ಎಂದು ಹಿರಿಯ ಸಾಹಿತಿ, ವಿಧಾನ ಪರಿಷತ್ ಸದಸ್ಯ ಡಾ.ದೊಡ್ಡರಂಗೇಗೌಡ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬಸವನಪುರ ಸಿಲಿಕಾನ್ ಸಿಟಿ ಸಮೂಹ ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.
ಉತ್ತಮ ಸೇವೆ ಸಲ್ಲಿಸಿದ ಉಪನ್ಯಾಸಕರನ್ನು ಸನ್ಮಾನಿಸಿ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ, ಸ್ಟ್ರಾಂಡ್ ಜೀವ ವಿಜ್ಞಾನ ಸಂಸ್ಥೆಯ ಮುಖ್ಯಸ್ಥ ಡಾ.ವಿಜಯಚಂದ್ರು, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ಎಂ.ಚಂದ್ರಶೇಖರ್ ಮಾತನಾಡಿದರು.
ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡೀನ್ ಡಾ.ರೋಸಿ ಕವಿತಾ ಸ್ವಾಗತಿಸಿದರು. ಪ್ರಾಚಾರ್ಯ ಜ್ಞಾನೇಶ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.