
ಪ್ರಜಾವಾಣಿ ವಾರ್ತೆದೊಡ್ಡಬಳ್ಳಾಪುರ: ನಗರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢ ಶಾಲೆಯಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ರಸ ಪ್ರಶ್ನೆ ಸ್ಪರ್ಧೆಯಲ್ಲಿ 2 ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿವೆ.
ದೇವನಹಳ್ಳಿ ತಾಲ್ಲೂಕಿನ ಬಚ್ಚಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಮೋಹನ್ಕುಮಾರ್, ಮಾನಸ ಮತ್ತು ದೇವನಹಳ್ಳಿ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಬಿ.ಎಂ.ಅಮೂಲ್ಯ, ಎಸ್.ವಿ. ಲಾವಣ್ಯ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ತಿಪ್ಪಮ್ಮ, ನಾಗರಾಜ್, ನಾಗಪ್ಪಗೌಡ, ಎಂ.ಬಿ.ಪ್ರಕಾಶ್, ಎಚ್.ವಿ.ಮುನಿರಾಜು, ಎಚ್.ಎನ್.ಪ್ರಕಾಶ್, ಎಚ್.ವಿ.ನಾರಾಯಣಪ್ಪ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.