
ಪ್ರಜಾವಾಣಿ ವಾರ್ತೆಬೆಂಗಳೂರು: ಶಿವಾಜಿನಗರದ ರಸೆಲ್ ಮಾರುಕಟ್ಟೆಯ ಪುನರ್‌ನಿರ್ಮಾಣಕ್ಕೆ ತಮ್ಮ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಂ.ಕೃಷ್ಣ ಸೋಮವಾರ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.
ರಸೆಲ್ ಮಾರುಕಟ್ಟೆಗೆ ಇತ್ತೀಚೆಗೆ ಬೆಂಕಿ ಬಿದ್ದು, 200ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿದ್ದವು. ಘಟನೆ ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಅವರು, ಅದರ ಪುನರ್‌ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಾಗಿ ಪತ್ರದಲ್ಲಿ ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.