ADVERTISEMENT

ರಸ್ತೆಅಪಘಾತ: ಅಪಾಯದಿಂದ ಶಾಸಕ ಪಾಟೀಲ್ ಪಾರು

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2012, 19:30 IST
Last Updated 9 ಏಪ್ರಿಲ್ 2012, 19:30 IST

ನೆಲಮಂಗಲ: ಇಲ್ಲಿಗೆ ಸಮೀಪದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬೊಮ್ಮನಹಳ್ಳಿ ಬಳಿ ಸೋಮವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದೇವರಹಿಪ್ಪರಗಿ ಶಾಸಕ ಎ.ಎಸ್. ಪಾಟೀಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಾಸಕರ ಕಾರು ಚಾಲಕನಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಶಾಸಕ ಪಾಟೀಲ್ ಬಳ್ಳಾರಿಯಲ್ಲಿ ಆಪ್ತರ ಮದುವೆ ಮುಗಿಸಿಕೊಂಡು ಕಾರಿನಲ್ಲಿ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಬೊಮ್ಮನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ನಜ್ಜು-ಗುಜ್ಜಾಗಿದೆ. ಕಾರಿನಲ್ಲಿ ಏರ್ ಬ್ಯಾಗ್ ಇದ್ದುದರಿಂದ ಶಾಸಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ಗೆಳೆಯನಾದ ಕಾರಿನ ಮಾಲೀಕ ಮತ್ತು ಚಾಲಕ ಜಿಲಾನ್ ಸಾಬ್ ಅವರ ಕಾಲು ಮುರಿದಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.