ADVERTISEMENT

ರಸ್ತೆಯಲ್ಲಿ ರಾಗಿ ನಾಟಿ ಮಾಡಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2017, 20:17 IST
Last Updated 24 ಅಕ್ಟೋಬರ್ 2017, 20:17 IST

ದಾಬಸ್‌ಪೇಟೆ: ಸೋಂಪುರ ಹೋಬಳಿಯ ಶಿವಗಂಗೆ ಗ್ರಾಮ ಪಂಚಾಯಿತಿಗೆ ಸೇರುವ ಘಂಟೆಹೊಸಹಳ್ಳಿ ಹರಿಜನ ಕಾಲೋನಿ ರಸ್ತೆ ಅಭಿವೃದ್ಧಿಪಡಿಸಲು ಒತ್ತಾಯಿಸಿ ಇಲ್ಲಿನ ನಿವಾಸಿಗಳು ಕೆಸರುಮಯವಾಗಿರುವ ರಸ್ತೆಯಲ್ಲಿ ರಾಗಿ ನಾಟಿ ಮಾಡಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಈ ಕಾಲೋನಿಯಲ್ಲಿ 85ಕ್ಕೂ ಹೆಚ್ಚು ಮನೆಗಳಿವೆ. ಪ್ರತಿ ಬಾರಿ ಮಳೆ ಬಂದಾಗಲೂ ಕೆಸರಿನಲ್ಲಿಯೇ ಓಡಾಡ ಬೇಕಾದ ಸ್ಥಿತಿ ಇದೆ. ಹಾಗಾಗಿ ಈ ರೀತಿ ಪ್ರತಿಭಟನೆ ನಡೆಸಿದ್ದೇವೆ. ಆಗಲಾದರೂ ಜನಪ್ರತಿನಿಧಿಗಳು ನಮ್ಮ ಕೇರಿ ರಸ್ತೆ ಬಗ್ಗೆ ಗಮನಹರಿಸಬಹುದು’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

‘ಟಾರು ರಸ್ತೆ ನಿರ್ಮಿಸಿ ಎಂದು ಸ್ಥಳೀಯ ಜನಪ್ರತಿನಿಧಿ ಹಾಗೂ ಪಂಚಾಯಿತಿ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿದ್ದೇವೆ. ಯಾವುದೇ ಪ್ರಯೋಜನವಾಗಿಲ್ಲ’ ಎಂದು ನಿವಾಸಿಗಳು ದೂರಿದರು.

ADVERTISEMENT

‘ಮತ ಕೇಳುವಾಗ ಎಲ್ಲಾ ಮೂಲಸೌಲಭ್ಯವನ್ನು ಒದಗಿಸುತ್ತೇವೆ ಎನ್ನುವ ಜನಪ್ರತಿನಿಧಿಗಳು, ಚುನಾವಣೆ ನಂತರ ಈ ಕಡೆ ತಲೆ ಹಾಕುವುದಿಲ್ಲ’ ಕಾಲೋನಿ ಜನ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.