ADVERTISEMENT

ರಸ್ತೆ ದುರಸ್ತಿ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2012, 19:45 IST
Last Updated 8 ಜನವರಿ 2012, 19:45 IST

ಯಲಹಂಕ: `ನಬಾರ್ಡ್~ ಅನುದಾನದಡಿ ಕೋಡಗಲಹಟ್ಟಿ ಗ್ರಾಮದಿಂದ ಬಿಲ್ಲಮಾರನಹಳ್ಳಿ ಮಾರ್ಗವಾಗಿ ವಿದ್ಯಾ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಡಾಂಬರೀಕರಣ ಕಾಮಗಾರಿಗೆ ಶಾಸಕ ಕೃಷ್ಣ ಬೈರೇಗೌಡ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, `ಚಿಕ್ಕ ಗ್ರಾಮಗಳು ಎಂಬ ಕಾರಣಕ್ಕೆ ಕಡೆಗಣಿಸದೆ ಆ ಹಳ್ಳಿಗಳಲ್ಲೂ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಅದರಂತೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಗ್ರಾಮದ ರಸ್ತೆಯನ್ನು 40 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ~ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರ ಅನುದಾನದಡಿ 5 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಅಶೋಕನ್, ದಾನೇಗೌಡ, ಶುಭಾ ನರಸಿಂಹಮೂರ್ತಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮಿ ರಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಕುಂತಲಮ್ಮ, ಮಾಜಿ ಅಧ್ಯಕ್ಷರಾದ ಕೆ.ಶ್ರೀನಿವಾಸಯ್ಯ, ಎಸ್.ಕೆ.ಆಂಜಿನಪ್ಪ, ನಾರಾಯಣ ಗೌಡ, ಕಾಂಗ್ರೆಸ್ ಮುಖಂಡರಾದ ಟಿ.ಎಂ.ಶ್ರೀರಾಮ್, ಉದಯ್ ಕುಮಾರ್ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.