ಬೆಂಗಳೂರು: ಸಂಚಾರ ವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ನಗರ ಸಂಚಾರ ಪೊಲೀಸರು `ರಸ್ತೆ ಸುರಕ್ಷತೆ ಬಗ್ಗೆ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ~ಯನ್ನು ಏರ್ಪಡಿಸಿದ್ದಾರೆ.
ಭಾನುವಾರ(ಏ.29) ಬೆಳಿಗ್ಗೆ 10 ಗಂಟೆಗೆ ಕಬ್ಬನ್ ಪಾರ್ಕ್‌ನಲ್ಲಿ ಈ ಸ್ಪರ್ಧೆ ನಡೆಯಲಿದೆ.
ಮಧ್ಯಪಾನ ಮಾಡಿ ವಾಹನ ಚಾಲನೆ, ಸೀಟ್ ಬೆಲ್ಟ್ ಬಳಕೆ, ಚಾಲನೆ ವೇಳೆ ಮೊಬೈಲ್ ಬಳಕೆಯಂತಹ ವಿಷಯಗಳನ್ನು ಆಯ್ದು ಸ್ಪರ್ಧಿಗಳು ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಬೇಕು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ನಗರದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತದಿಂದ 800 ಜನ ಸಾವನ್ನಪ್ಪುತ್ತಿದ್ದು, ಐದು ಸಾವಿರ ಜನ ಗಾಯಗೊಳ್ಳುತ್ತಿದ್ದಾರೆ. ಕಳೆದ ವರ್ಷದ ಮೊದಲ ಮೂರು ತಿಂಗಳಿಗೆ ಹೋಲಿಸಿದರೆ ಈ ವರ್ಷ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇಳಿಮುಖವಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ನಮ್ಮ ಉದ್ದೇಶ ಎಂದು ಪೊಲೀಸರು ಹೇಳಿದ್ದಾರೆ.
ಸ್ಪರ್ಧೆಯಲ್ಲಿ ಭಾಗವಹಿಸಲು ವಯಸ್ಸಿನ ಅಂತರವಿಲ್ಲ. ಉತ್ತಮ ಚಿತ್ರ ಬಿಡಿಸಿದ ಸ್ಪರ್ಧಿಗಳಿಗೆ ಬಹುಮಾನ ನೀಡಲಾಗುವುದು ಹಾಗೂ ಸ್ಪರ್ಧೆಗೆ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು ಎಂದು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.