ADVERTISEMENT

ರಸ್ತೆ ಸುರಕ್ಷತೆ: ಚಾಲಕರಿಗೆ ಶಿಬಿರ

​ಪ್ರಜಾವಾಣಿ ವಾರ್ತೆ
Published 17 ಜುಲೈ 2012, 19:30 IST
Last Updated 17 ಜುಲೈ 2012, 19:30 IST

ಬೆಂಗಳೂರು: ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ ವಾಹನಗಳ ಚಾಲಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ವಾರಾಂತ್ಯದೊಳಗೆ ಒಂದು ದಿನದ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

`ಶಾಲಾ ವಾಹನಗಳು ಅಪಘಾತಕ್ಕೀಡಾಗಿ ಮುಗ್ಧ ಮಕ್ಕಳು ಸಾವನ್ನಪ್ಪುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಆದ್ದರಿಂದ ಮಕ್ಕಳ ರಕ್ಷಣೆಗೆ ಪ್ರಥಮ ಆದ್ಯತೆ ನೀಡುವ ಅಗತ್ಯವಿದೆ. ಮಕ್ಕಳನ್ನು ಶಾಲಾ ವಾಹನದಲ್ಲಿ ಕರೆದೊಯ್ಯುವಾಗ ಚಾಲಕರು ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಂತಹ ಅಂಶಗಳ ಬಗ್ಗೆ ಈ ಶಿಬಿರದಲ್ಲಿ ಮಾಹಿತಿ ನೀಡಲಾಗುವುದು~ ಎಂದು ಪೊಲೀಸರು ಹೇಳಿದ್ದಾರೆ.

`ಶಾಲಾ ವಾಹನ ಅಪಘಾತಕ್ಕೀಡಾಗಿ ಮಕ್ಕಳಿಗೆ ಸಣ್ಣ ಗಾಯಗಳಾದರೂ ಆ ಶಾಲೆ ನಾಗರೀಕರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ. ಈ ದೃಷ್ಟಿಯಿಂದ ಸಂಚಾರ ಪೊಲೀಸ್ ಇಲಾಖೆಯು 2005ರಲ್ಲೇ `ಸೇಫ್ ರೂಟ್ ಟು ಸ್ಕೂಲ್~ ಎಂಬ ಯೋಜನೆಯನ್ನು ಜಾರಿಗೆ ತಂದಿದೆ. ಆ ಯೋಜನೆಯಡಿ ಈ ಶಿಬಿರವನ್ನು ಆಯೋಜಿಸಲಾಗುವುದು. ಮೋಟಾರು ವಾಹನ ಕಾಯ್ದೆ, ಸುರಕ್ಷತಾ ಚಾಲನೆಯ ಕೌಶಲ್ಯಗಳು, ಸಂಚಾರ ನಿಯಮಗಳು, ತುರ್ತು ಚಿಕಿತ್ಸೆ ಸೇರಿದಂತೆ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಶಿಬಿರದಲ್ಲಿ ಮಾಹಿತಿ ನೀಡಲಾಗುವುದು. 

ಈ ಶಿಬಿರಕ್ಕೆ ಉಚಿತ ಪ್ರವೇಶವಿದ್ದು, ಶಾಲಾ ಆಡಳಿತ ಮಂಡಳಿಯು ಎಲ್ಲಾ ಚಾಲಕರನ್ನು ಶಿಬಿರಕ್ಕೆ ಕಳುಹಿಸಿ ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಚಾರ ತರಬೇತಿ ಸಂಸ್ಥೆಯ (ಟಿಟಿಐ) ಸಹಾಯಕ ಪೊಲೀಸ್ ಕಮಿಷನರ್ ಅವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ : 9480801808, ಇ-ಮೇಲ್ ವಿಳಾಸ: ಛ್ಝ್ಚಠ್ಟಿಚ್ಛ್ಛಜ್ಚಿಚ್ಚಿಃಜಞಜ್ಝಿ.್ಚಟಞ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.