ADVERTISEMENT

ರಾಜಕೀಯ ಆಟ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2012, 19:30 IST
Last Updated 17 ಆಗಸ್ಟ್ 2012, 19:30 IST

ಬೆಂಗಳೂರು: `ಅಸ್ಸಾಂನಲ್ಲಿ ಅಲ್ಪಸಂಖ್ಯಾತ ಸಮುದಾಯದವರ ಮೇಲೆ ದಾಳಿ ನಡೆಸಿದವರೇ, ಬೆಂಗಳೂರಿನಲ್ಲಿ ವಾಸಿಸುತ್ತಿರುವ ಈಶಾನ್ಯ ರಾಜ್ಯಗಳ ಜನತೆಯಲ್ಲಿ ಭೀತಿಯ ಭಾವನೆ ಮೂಡಿಸುತ್ತಿದ್ದಾರೆ. ಇದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ರಾಜಕೀಯ ಆಟ~ ಎಂದು ಸಿಪಿಎಂ ರಾಜ್ಯ ಮಂಡಳಿ ಕಾರ್ಯದರ್ಶಿ ಜಿ.ವಿ. ಶ್ರೀರಾಮ ರೆಡ್ಡಿ ಆರೋಪಿಸಿದರು.

`ಭಯ ಹುಟ್ಟಿಸುವವರನ್ನು ಸರ್ಕಾರ ಬಂಧಿಸಬೇಕು. ಈಶಾನ್ಯ ರಾಜ್ಯಗಳ ಜನ ಬೆಂಗಳೂರು ಬಿಟ್ಟು ಹೋಗಬಾರದು. ಅವರಿಗೆ ಸಿಪಿಎಂನ ಕಾರ್ಮಿಕ ಸಂಘಟನೆಗಳು ರಕ್ಷಣೆ ನೀಡುತ್ತವೆ~ ಎಂದು ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಿಐಟಿಯು ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್. ಪ್ರಸನ್ನ ಕುಮಾರ್, ರಾಜ್ಯ ಮಂಡಳಿ ಸದಸ್ಯರಾದ ಮಾರುತಿ ಮಾನ್ಪಡೆ ಮತ್ತು ಜಿ.ಎನ್. ನಾಗರಾಜ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.