ADVERTISEMENT

ರಾಜಕೀಯ ನಂಟು: ಶಿಕ್ಷಕರ ಪಟ್ಟಿಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2017, 19:30 IST
Last Updated 13 ಜುಲೈ 2017, 19:30 IST
ರಾಜಕೀಯ ನಂಟು: ಶಿಕ್ಷಕರ ಪಟ್ಟಿಗೆ ಸಿದ್ಧತೆ
ರಾಜಕೀಯ ನಂಟು: ಶಿಕ್ಷಕರ ಪಟ್ಟಿಗೆ ಸಿದ್ಧತೆ   

ಬೆಂಗಳೂರು: ರಾಜಕೀಯ ಪಕ್ಷಗಳೊಂದಿಗೆ ಒಡನಾಟ ಇಟ್ಟುಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ಪಟ್ಟಿಯನ್ನು ಶಿಕ್ಷಣ ಇಲಾಖೆ ಗೌಪ್ಯವಾಗಿ ಸಿದ್ಧಪಡಿಸುತ್ತಿದೆ.

ಯಾವುದೇ ರಾಜಕೀಯ ಪಕ್ಷ ಅಥವಾ ಅದರ ಸಹ ಸಂಘಟನೆಗಳೊಂದಿಗೆ ಸಂಪರ್ಕ  ಹೊಂದಿರುವವರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸದಿರಲು ಉದ್ದೇಶಿಸಲಾಗಿದೆ.

ಅಲ್ಲದೆ, ಈ ಶಿಕ್ಷಕರು ಸದ್ಯ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯಿಂದ ದೂರದ ಮತ್ತೊಂದು ಜಿಲ್ಲೆಗೆ ವರ್ಗಾಯಿಸುವ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ.
ಕಾಂಗ್ರೆಸ್‌ ನಾಯಕರು ರಾಷ್ಟ್ರೀಯ ಸ್ವಯಂ ಸೇವಕಸಂಘ(ಆರ್‌ಎಸ್‌ಎಸ್‌)ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಂಘಟನೆಗಳೊಂದಿಗೆ ನಿಕಟ ಸಂಬಂಧ ಹೊಂದಿರುವ ಕಾಲೇಜು ಉಪನ್ಯಾಸಕರ ಪಟ್ಟಿ ಕೇಳಿದ್ದಾರೆ. ಇದರಿಂದಾಗಿ ಗೌಪ್ಯ
ವಾಗಿ ಶಿಕ್ಷಕರ ಪಟ್ಟಿಯನ್ನೂ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ADVERTISEMENT

ಶೀಘ್ರವೇ ಪಟ್ಟಿ  ಸಿದ್ಧ: ತನ್ವೀರ್ ಸೇಠ್
‘ಶಿಕ್ಷಕರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗುವುದು ಕರ್ನಾಟಕ ನಾಗರಿಕ ಸೇವಾ ನಿಯಮಗಳಿಗೆ ವಿರುದ್ಧ. ಪಕ್ಷಗಳು ಮತ್ತು ಸಂಘಟನೆಗಳೊಂದಿಗೆ ಗುರುತಿಸಿಕೊಂಡಿರುವ ಶಿಕ್ಷಕರ ಪಟ್ಟಿಯನ್ನು ಶೀಘ್ರವೇ ಸಿದ್ಧಪಡಿಸಿ ಅವರ ಮೇಲೆ ನಿರಂತರ ನಿಗಾ ವಹಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್‌  ಹೇಳಿದರು.

‘ಶಾಲೆಗಳ ಪಾಠ ಪ್ರವಚನ ಕಾರ್ಯವನ್ನು ಬಿಟ್ಟು ರಾಜಕೀಯ ನಾಯಕರ ಅನುಕೂಲಕ್ಕಾಗಿ ಕಾರ್ಯನಿರ್ವಹಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.  ಮಕ್ಕಳ ಭವಿಷ್ಯ ರೂಪಿಸುವುದಕ್ಕಷ್ಟೇ ಶಿಕ್ಷಕರು ತಮ್ಮ ಸಮಯ ಮೀಸಲಿಡಬೇಕು ಎಂಬುದು ಇದರ ಉದ್ದೇಶ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.