ADVERTISEMENT

ರಾಜ್ಯಪಾಲರ ಭಾಷಣಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2012, 19:30 IST
Last Updated 25 ಜನವರಿ 2012, 19:30 IST

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಮಾಡಲಿರುವ ಭಾಷಣಕ್ಕೆ ಸಚಿವ ಸಂಪುಟ ಸಭೆ ಬುಧವಾರ ತನ್ನ ಅನುಮೋದನೆ ನೀಡಿತು.

ಇದೊಂದೇ ವಿಷಯ ಇದ್ದ ಕಾರಣ ಹೆಚ್ಚು ಮಂದಿ ಸಚಿವರು ಸಂಪುಟ ಸಭೆಗೆ ಬಂದಿರಲಿಲ್ಲ. ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸೇರಿ ಹತ್ತು ಮಂದಿ ಸಚಿವರು ಹಾಜರಿದ್ದು, ರಾಜ್ಯಪಾಲರ ಭಾಷಣಕ್ಕೆ ಒಪ್ಪಿಗೆ ಸೂಚಿಸಿದರು. ಸರ್ಕಾರದ ಸಾಧನೆಗಳ ಬಗ್ಗೆ ಭಾಷಣದಲ್ಲಿ ಉಲ್ಲೇಖ ಇದ್ದು, ರಾಜ್ಯಪಾಲರು ಜ.30ರಂದು ನಡೆಯುವ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಅದನ್ನೇ ಓದಲಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳಿಗೆ 15 ಕೋಟಿ ಮಂಜೂರು
ಕಾರವಾರ ಬಂದರಿನಲ್ಲಿ ಹೂಳೆತ್ತುವುದು ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿಗಳ ಸಲುವಾಗಿ 15 ಕೋಟಿ ರೂಪಾಯಿ ಮಂಜೂರು ಮಾಡಲು ಸಚಿವ ಸಂಪುಟ ಸಭೆ ತನ್ನ ಒಪ್ಪಿಗೆ ನೀಡಿತು.

ದತ್ತ ಜಯಂತಿ ಪ್ರಕರಣ ವಾಪಸ್
ದತ್ತ ಜಯಂತಿ ಸಂದರ್ಭದಲ್ಲಿ ಪ್ರಚೋದಕಾರಿ ಭಾಷಣ ಮಾಡಿದ್ದರು ಎಂಬ ಕಾರಣಕ್ಕೆ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಅವರ ವಿರುದ್ಧ ದಾಖಲಿಸಲಾಗಿದ್ದ ಮೊಕದ್ದಮೆಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಇದೇ ವೇಳೆ ನಿರ್ಧರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.