ಬೆಂಗಳೂರು: 2012-13ನೇ ಸಾಲಿನ ಬಜೆಟ್ ಸಿದ್ಧಪಡಿಸುವ ಕಾರ್ಯದಲ್ಲಿ ದಿನವಿಡೀ ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಆರ್ಥಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಇಲ್ಲಿನ ರಾಜ್ಯ ವಿದ್ಯುತ್ ನಿಗಮದ ಪ್ರಧಾನ ಕಚೇರಿಯಲ್ಲಿ ಮುಖ್ಯಮಂತ್ರಿಗಳು ಭಾನುವಾರ ಇಡೀ ದಿನ ಸಭೆ ನಡೆಸಿದರು. ಸೋಮವಾರ ಕೂಡ ಅವರು ಬಜೆಟ್ ಸಿದ್ಧತೆಗೆ ಸಂಬಂಧಿಸಿದಂತೆ ಸಭೆ ನಡೆಸಲಿದ್ದಾರೆ.
ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಬಜೆಟ್ ಸಿದ್ಧತೆ ಕುರಿತು 18ರಂದು ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ.
ಅದೇ ದಿನ ಬಜೆಟ್‌ನ ಪ್ರತಿಯನ್ನು ಮುದ್ರಣಕ್ಕೆ ಕಳುಹಿಸಲು ಅಂತಿಮಗೊಳಿಸಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.