ADVERTISEMENT

ರಾಷ್ಟ್ರೀಯ ಸುರಕ್ಷತಾ ಸಪ್ತಾಹ

​ಪ್ರಜಾವಾಣಿ ವಾರ್ತೆ
Published 13 ಜನವರಿ 2012, 19:25 IST
Last Updated 13 ಜನವರಿ 2012, 19:25 IST

ಬೆಂಗಳೂರು: `ಅಪಘಾತದಿಂದ ಒಂದು ಇಡೀ ಕುಟುಂಬದ ಕೊಲೆ ಆಗುತ್ತದೆ~ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಹೇಳಿದರು. ಸಾರಿಗೆ ಇಲಾಖೆ ವತಿಯಿಂದ ಶುಕ್ರವಾರ ನಗರದ ಯವನಿಕ ಸಭಾಂಗಣದಲ್ಲಿ ಏರ್ಪಡಿಸಿದ್ದ  23 ನೇ ರಾಷ್ಟ್ರೀಯ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

`ಪಾಶ್ಚಿಮಾತ್ಯ ದೇಶಗಳಲ್ಲಿ ಸಾರಿಗೆಯ ಬಗ್ಗೆ ಹೆಚ್ಚಿನ ಕಾನೂನುಗಳು. ಅವುಗಳನ್ನು ಅಲ್ಲಿ ಪಾಲಿಸುವವವರಿಗೆ ಇಲ್ಲಿ ಪಾಲಿಸಲು ಮಾತ್ರ ಕಷ್ಟ. ಇಂದಿನ ಯುವಕರು ಡ್ಯ್ರಾಗ್‌ರೇಸ್, ವೀಲಿಂಗ್ ಮಾಡುತ್ತ ತಮ್ಮ ಪ್ರಾಣ ಕಳೆದುಕೊಳ್ಳುತ್ತಾರೆ. ಒಬ್ಬನೇ ಮಗ ಇರುವ ತಂದೆ-ತಾಯಿಗಳ ಗೋಳು ಹೇಳತೀರದು~ ಎಂದು ಹೇಳಿದರು.

ಸಾರಿಗೆ ಇಲಾಖೆಯು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ರಸಪ್ರಶ್ನೆಯಲ್ಲಿ ವಿಜೇತರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ ಬಿ.ಜಿ.ಜ್ಯೋತಿ ಪ್ರಕಾಶ ಮಿರ್ಜಿ, ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಆಯುಕ್ತ ಟಿ.ಶ್ಯಾಮಭಟ್, ಜಂಟಿ ಸಾರಿಗೆ ಆಯುಕ್ತ ಎಚ್.ಜಿ.ಕುಮಾರ್ ಉಪಸ್ಥಿತರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.