ADVERTISEMENT

ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ ವಿಸ್ತರಿಸಲು ಕೇಂದ್ರ ಸರ್ಕಾರ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 4 ಜೂನ್ 2013, 20:11 IST
Last Updated 4 ಜೂನ್ 2013, 20:11 IST

ನವದೆಹಲಿ: `ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ'ಯನ್ನು ಚಿಂದಿ ಆರಿಸುವವರು, ಸೈಕಲ್ ರಿಕ್ಷಾ ತುಳಿಯುವವರು, ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ ವಿಸ್ತರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

2011ರ ಜನಗಣತಿ ಪ್ರಕಾರ ಸುಮಾರು ಒಂದು ಕೋಟಿ ಮಂದಿಗೆ ಇದರ ಲಾಭ ಆಗಲಿದೆ. ಜನಗಣತಿ ಮುಗಿದಿದ್ದು, ಅಂತಿಮ ಪ್ರಕಟಣೆ ಹೊರಬೀಳಬೇಕಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.