ADVERTISEMENT

ರಾಷ್ಟ್ರ ನಿರ್ಮಾಣದಲ್ಲಿ ಯುವಕರು ತೊಡಗಲಿ - ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2011, 19:30 IST
Last Updated 24 ನವೆಂಬರ್ 2011, 19:30 IST
ರಾಷ್ಟ್ರ ನಿರ್ಮಾಣದಲ್ಲಿ ಯುವಕರು ತೊಡಗಲಿ - ಬಚ್ಚೇಗೌಡ
ರಾಷ್ಟ್ರ ನಿರ್ಮಾಣದಲ್ಲಿ ಯುವಕರು ತೊಡಗಲಿ - ಬಚ್ಚೇಗೌಡ   

ನೆಲಮಂಗಲ: `ಕಠಿಣ ಪರಿಶ್ರಮ ಹಾಗೂ ನಿರಂತರ ಪ್ರಯತ್ನದಿಂದ ಏನನ್ನಾದರೂ ಸಾಧಿಸಬಹುದು. ದೇಶದ ಭವಿಷ್ಯವೆನಿಸಿರುವ ಯುವ ಜನತೆ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು~ ಎಂದು ಸಚಿವ ಬಿ.ಎನ್.ಬಚ್ಚೇಗೌಡ ಕರೆ ನೀಡಿದರು.

ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯು ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಏರ್ಪಡಿಸಿದ್ದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, `ವಿದ್ಯಾರ್ಥಿಗಳು ಪ್ರಚಲಿತ ವಿದ್ಯಮಾನಗಳ ಕುರಿತು ಮಾಹಿತಿ ಪಡೆಯಲು ದಿನಪತ್ರಿಕೆಗಳನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು~ ಎಂದರು.

ಶಾಸಕ ಎಂ.ವಿ. ನಾಗರಾಜು ಮಾತನಾಡಿ, ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಸಭಾಂಗಣವನ್ನು ನಿರ್ಮಿಸಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಭಾ ಪ್ರದರ್ಶನಕ್ಕೆ ಸೂಕ್ತವಾದ ಕಲಾಮಂದಿರ ನಿರ್ಮಾಣಕ್ಕಾಗಿ ಶಾಸಕರ ನಿಧಿಯಿಂದ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ತಾ.ಪಂ. ಅಧ್ಯಕ್ಷ ಲಕ್ಷ್ಮೀನಾರಾಯಣ, ಸಚಿವಾಲಯದ ಜಂಟಿ ಕಾರ್ಯದರ್ಶಿ ಬಿ.ರಾಜಣ್ಣ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ನಂಜುಂಡಮೂರ್ತಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆನಂದ್, ಪುರಸಭೆ ಅಧ್ಯಕ್ಷ ಪಿಳ್ಳಪ್ಪ, ಯುವ ಮುಖಂಡ ಅಶೋಕ ಉಪಸ್ಥಿತರಿದ್ದರು.

ಜಿಲ್ಲೆಯ 40 ಕಾಲೇಜುಗಳಿಂದ ಸುಮಾರು 450 ಸ್ಪರ್ಧಿಗಳು ಭಾಗವಹಿಸಿದ್ದರು. ಒಟ್ಟು 22 ಸ್ಪರ್ಧೆಗಳನ್ನು ನಡೆಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ತಹಸೀಲ್ದಾರ್ ಅನಿಲ್‌ಕುಮಾರ್ ಬಹುಮಾನ ವಿತರಿಸಿದರು.

ಪ್ರಾಂಶುಪಾಲರ ಸಂಘದ ಅಧ್ಯಕ್ಷ ಚನ್ನಪ್ಪ, ಬಿಜೆಪಿ ಮುಖಂಡರಾದ ಮುನಿರಾಮಯ್ಯ, ರಾಮಸ್ವಾಮಿ, ಎಸ್.ಟಿ.ಜಯಂತಿ ಅಶೋಕ್, ಸುರೇಶ್, ರಾಮಕೃಷ್ಣಯ್ಯ, ವಿಶ್ರಾಂತ ಶಿಕ್ಷಣ ಅಧಿಕಾರಿ ನಾರಾಯಣ್, ಪ್ರಾಂಶುಪಾಲರಾದ ರತ್ನಮ್ಮ, ಸಂಘದ ಅಧ್ಯಕ್ಷ ಬಿ.ಚನ್ನಪ್ಪ, ಕಾರ್ಯದರ್ಶಿ ಎಚ್.ಬಿ ಪ್ರಕಾಶ್, ಪರಶಿವಮೂರ್ತಿ, ಜಗದೀಶ್, ರಾಜಣ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.