ಬೆಂಗಳೂರು: ‘ಇತ್ತೀಚಿನ ದಿನಗಳಲ್ಲಿ ಕಾರ್ಮಿಕರ ಸಮಸ್ಯೆ ಕೃಷಿ ಕ್ಷೇತ್ರವನ್ನು ಕಾಡುತ್ತಿದೆ. ರೈತರು ಸಂಘಟಿತರಾದಾಗ ಮಾತ್ರ ಕೃಷಿ ಕ್ಷೇತ್ರದಲ್ಲಿ ಕಾರ್ಮಿಕರ ಸಮಸ್ಯೆಯನ್ನು ನಿವಾರಿಸಬಹುದು’ ಎಂದು ಬೆಂಗಳೂರು ಕೃಷಿ ವಿಶ್ವವಿ ದ್ಯಾಲಯದ ಕುಲಪತಿ ಡಾ.ಕೆ.ನಾರಾ ಯಣಗೌಡ ಹೇಳಿದರು.
ಕೃಷಿಕ್ ಸರ್ವೋದಯ ಫೌಂಡೇಶನ್ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಸಂಸ್ಥೆಯ ಆಜೀವ ಸದಸ್ಯರ ಸಮಾವೇಶ, ರೈತರಿಗೆ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಯುವಕರು ಕೃಷಿಯಲ್ಲಿ ತೊಡಗದೆ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಮಿಕರ ಸಮಸ್ಯೆ ಕೃಷಿ ಕ್ಷೇತ್ರವನ್ನು ಕಾಡುತ್ತಿದೆ. ರೈತರು ಸಂಘಟಿತರಾಗಿ ಪರಸ್ಪರ ಸಹಕಾರದಿಂದ ಕೃಷಿ ಕೆಲಸಗಳನ್ನು ನಿರ್ವ ಹಿಸಿದರೆ ಕಾರ್ಮಿಕರ ಕೊರತೆಯನ್ನು ಕಡಿಮೆ ಮಾಡಬಹುದು ಎಂದರು.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿದಾಗ ಮಾತ್ರ ಉತ್ತಮ ಸ್ಥಾನಕ್ಕೇರಲು ಸಾಧ್ಯ. ಆ ನಿಟ್ಟಿನಲ್ಲಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉಪಯುಕ್ತವಾದ ತರಬೇತಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಶ್ಲಾಘಿಸಿದರು.
‘ಸ್ಪರ್ಧಾತ್ಮಕ ಪರೀಕ್ಷೆ ತೆಗೆದು ಕೊಳ್ಳುವ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ವೈಯಕ್ತಿಕವಾಗಿ ಸಂಸ್ಥೆಗೆ ಪ್ರತಿವರ್ಷ ₨ 50 ಲಕ್ಷ ನೀಡುತ್ತೇನೆ. ಇದೇ 15ರಂದು ₨10 ಲಕ್ಷ ನೀಡಲಾ ಗುವುದು. ಆದಿಚುಂಚನಗಿರಿ ಮಠ ಮತ್ತು ಒಕ್ಕಲಿಗರ ಸಂಘವು ಸಹ ಸಂಸ್ಥೆಗೆ ವಾರ್ಷಿಕ ತಲಾ ₨50 ಲಕ್ಷ ನೀಡಬೇಕು’ ಎಂದು ಮನವಿ ಮಾಡಿದರು.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿ ಗಳು ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಗುರಿ ಮುಟ್ಟಲು ಸಾಧ್ಯ. ಸಂಸ್ಥೆಯ ಎಲ್ಲ ಕೆಲಸಗಳಲ್ಲಿಯೂ ಮಠವು ಕೈಜೋ ಡಿಸಲಿದೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ 74 ವಿದ್ಯಾರ್ಥಿಗಳಗೆ ₨10 ಲಕ್ಷ ವಿದ್ಯಾರ್ಥಿ ವೇತನದ ಚೆಕ್ ವಿತರಿಸ ಲಾಯಿತು. ಪ್ರಗತಿಪರ ಕೃಷಿಕರಾದ ಉಡುಪಿ ಜಿಲ್ಲೆಯ ತಿಮ್ಮಣ್ಣ ಹೆಗಡೆ, ಚಿತ್ರದುರ್ಗ ಜಿಲ್ಲೆಯ ವಿರುಪಮ್ಮ ಅವರನ್ನು ಸನ್ಮಾನಿಸಲಾಯಿತು.
ರೈತರಿಗೆ ಆನ್‌ಲೈನ್‌ನಲ್ಲಿ ಕೃಷಿ ಮಾಹಿತಿ
ಬೆಂಗಳೂರು: ಆಯಾ ಜಿಲ್ಲೆಗಳಲ್ಲಿನ ಕೃಷಿ ಚಟುವಟಿಕೆಗಳಿಗೆ ಸಂಬಂ ಧಿಸಿದ ಪೂರ್ಣ ಮಾಹಿತಿಯನ್ನು ನಿತ್ಯವೂ ರೈತರಿಗೆ ಸುಲಭವಾಗಿ ತಲುಪಿಸಲು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹೊಸ ಯೋಜನೆ ರೂಪಿಸಿದೆ.
ಹಳ್ಳಿಗಳಲ್ಲಿರುವ ಹಾಲು ಉತ್ಪಾ ದಕರ ಸಹಕಾರ ಸಂಘಗಳ ಮೂಲಕ ರೈತರಿಗೆ ಅಗತ್ಯ ಹಾಗೂ ಸೂಕ್ತ ಮಾಹಿತಿಯನ್ನು ಒದಗಿಸು ವುದು ₨ 2 ಕೋಟಿ ವೆಚ್ಚದ ಈ ಯೋಜನೆಯ ಮುಖ್ಯ ಉದ್ದೇಶ.
ರಾಜ್ಯ ಸರ್ಕಾರ ಇದಕ್ಕೆ ಹಸಿರು ನಿಶಾನೆ ತೋರಿಸಿದ್ದು ಶೀಘ್ರದಲ್ಲೇ ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬ ಳ್ಳಾಪುರ ಜಿಲ್ಲೆಗಳಲ್ಲಿ ಪ್ರಾಯೋಗಿ ಕವಾಗಿ ಜಾರಿಗೆ ತರಲಾಗುವುದು. ಈ ಸಂಬಂಧ ಈಗಾಗಲೇ ಕೆಎಂ ಎಫ್ ಜತೆಗೆ ಚರ್ಚಿಸಲಾಗಿದ್ದು, 200 ಹಳ್ಳಿಗಳನ್ನು ಗುರುತಿಸ ಲಾಗಿದೆ ಎಂದು ಬೆಂಗಳೂರು ಕೃಷಿ ವಿ.ವಿ ವಿಸ್ತರಣಾ ವಿಭಾಗದ ನಿರ್ದೇ ಶಕ ಎನ್. ನಾಗರಾಜ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.