ADVERTISEMENT

ರೈಲಿನಲ್ಲಿ ಬೆಂಕಿ ಅವಘಡ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2015, 20:09 IST
Last Updated 16 ಫೆಬ್ರುವರಿ 2015, 20:09 IST
ಯಶವಂತಪುರ ರೈಲು ನಿಲ್ದಾಣದಲ್ಲಿ ಸೋಮವಾರ ಬೆಂಕಿ ಹತ್ತಿಕೊಂಡಿದ್ದ ಭುವನೇಶ್ವರ–ಯಶವಂತಪುರ ರೈಲಿನ ಬೋಗಿಯನ್ನು ಪೊಲೀಸರು ಪರಿಶೀಲಿಸಿದರು
ಯಶವಂತಪುರ ರೈಲು ನಿಲ್ದಾಣದಲ್ಲಿ ಸೋಮವಾರ ಬೆಂಕಿ ಹತ್ತಿಕೊಂಡಿದ್ದ ಭುವನೇಶ್ವರ–ಯಶವಂತಪುರ ರೈಲಿನ ಬೋಗಿಯನ್ನು ಪೊಲೀಸರು ಪರಿಶೀಲಿಸಿದರು   

ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದಲ್ಲಿ ಸೋಮವಾರ ಭುವ ನೇಶ್ವರ್‌–ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿನ ಬೋಗಿಯಲ್ಲಿ ಬೆಂಕಿ ಹತ್ತಿ ಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೆಳಿಗ್ಗೆ 11.30ರ ಸುಮಾರಿಗೆ ಭುವನೇಶ್ವರದಿಂದ ಬಂದಿದ್ದ ರೈಲು ಯಶವಂತಪುರ ನಿಲ್ದಾಣದಲ್ಲಿ ನಿಂತಿತ್ತು. ಮಧ್ಯಾಹ್ನ 2.30ರ ಸುಮಾರಿಗೆ ಎಸ್‌–8 ಬೋಗಿಯಲ್ಲಿ ಹೊಗೆ ಬರುತ್ತಿ ರುವುದನ್ನು ನೋಡಿದ ಪ್ರಯಾಣಿಕರು ನಿಲ್ದಾಣದ ಅಧಿಕಾರಿಗಳಿಗೆ ವಿಷಯ ತಿಳಿಸಿದರು.

ಕೂಡಲೇ ಸ್ಥಳಕ್ಕೆ ಬಂದ ರೈಲ್ವೆ ಅಧಿಕಾರಿಗಳು ಮತ್ತು ರೈಲ್ವೆ ಭದ್ರತಾ ಪಡೆ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಎರಡು ಆಸನಗಳು ಸುಟ್ಟು ಹೋಗಿವೆ.

ಘಟನೆ ವೇಳೆ ಬೋಗಿಯಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.