ADVERTISEMENT

ರೈಲು ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಮನವಿ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2011, 19:30 IST
Last Updated 20 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿ ನೇತೃತ್ವದ ಪದಾಧಿಕಾರಿಗಳು ಈಚೆಗೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರನ್ನು ಭೇಟಿ ಮಾಡಿ ಬೆಂಗಳೂರು ರೈಲು ನಿಲ್ದಾಣಕ್ಕೆ ಸಂಗೊಳ್ಳಿರಾಯಣ್ಣ ಅವರ ಹೆಸರಿಡಬೇಕೆಂದು ಮನವಿ ಮಾಡಿದ್ದಾರೆ.

ಪಾಲಿಕೆ ಈ ಬಗ್ಗೆ ನಿರ್ಣಯ ಕೈಗೊಂಡಿರುವುದನ್ನು ಮತ್ತು ನಗರಾಭಿವೃದ್ಧಿ ಇಲಾಖೆ ಈ ಕುರಿತು ಕೇಂದ್ರ ರೈಲು ಮಂಡಳಿಗೆ ಪತ್ರ ಬರೆದಿರುವುದರ ಕುರಿತು ತಿಳಿಸಿದ್ದಾರೆ. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.