ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಯೋತ್ಪಾದನಾ ದಾಳಿ ನಡೆಯಬಹುದೆಂಬ ಮಾಹಿತಿ ಕೇಂದ್ರ ಗುಪ್ತಚರ ಇಲಾಖೆಯಿಂದ ಬಂದಿದ್ದು, ನಗರದ ಎಲ್ಲ ರೈಲು ನಿಲ್ದಾಣಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತೆ ಹೆಚ್ಚಿಸಲಾಗಿದೆ.
`ನಗರದ ಎಲ್ಲ ರೈಲು ನಿಲ್ದಾಣಗಳಲ್ಲಿ ಲೋಹ ಶೋಧಕಗಳನ್ನು ಅಳವಡಿಸಲಾಗಿದ್ದು, ಎಲ್ಲ ಪ್ರಯಾಣಿಕರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ~. ಎಂದು ರೈಲ್ವೆ ರಕ್ಷಣಾ ಪಡೆಯ ಬೆಂಗಳೂರು ವಿಭಾಗದ ಭದ್ರತಾ ಆಯುಕ್ತ ಲೂಯಿಸ್ ಅಮುಥಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.