ADVERTISEMENT

ರೋಹಿಣಿ ಸಿಂಧೂರಿ ಅರ್ಜಿ ತುರ್ತು ವಿಚಾರಣೆಗೆ ನಕಾರ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2018, 19:30 IST
Last Updated 26 ಮಾರ್ಚ್ 2018, 19:30 IST
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ   

ಬೆಂಗಳೂರು: ವರ್ಗಾವಣೆ ಆದೇಶ ಪ್ರಶ್ನಿಸಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ಹೈಕೋರ್ಟ್‌ ನಿರಾಕರಿಸಿದೆ.

‘ಇಂದೇ (ಮಾರ್ಚ್‌ 26) ಅರ್ಜಿ ವಿಚಾರಣೆ ನಡೆಸಬೇಕು’ ಎಂಬ ರೋಹಿಣಿ ಪರ ವಕೀಲರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಒಪ್ಪಲಿಲ್ಲ.

ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಸುಬ್ರಹ್ಮಣ್ಯ ಜೋಯಿಸ್, ‘ರಾಜ್ಯದ ಆಡಳಿತದಲ್ಲಿ ಅರಾಜಕತೆ ಇದೆ. ಬೇಕಾಬಿಟ್ಟಿ ವರ್ಗಾವಣೆ ಮಾಡಲಾಗುತ್ತಿದೆ’ ಎಂದು ಆಕ್ಷೇಪಿಸಿದರು.

ADVERTISEMENT

ಇದಕ್ಕೆ ನ್ಯಾಯಪೀಠ, ‘ಸರದಿಯ ಅನುಸಾರವೇ ಅರ್ಜಿ ವಿಚಾರಣೆಗೆ ಬರಲಿ ನೋಡೋಣ’ ಎಂದು ಪ್ರತಿಕ್ರಿಯಿಸಿ ಮಂಗಳವಾರಕ್ಕೆ (ಮಾರ್ಚ್‌ 27) ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.