ADVERTISEMENT

ಲಯನ್ಸ್ ಪದಗ್ರಹಣ ಸಮಾರಂಭ

​ಪ್ರಜಾವಾಣಿ ವಾರ್ತೆ
Published 20 ಜುಲೈ 2013, 20:02 IST
Last Updated 20 ಜುಲೈ 2013, 20:02 IST

ಬೆಂಗಳೂರು: `ಲಯನ್ಸ್ ಇಂಟರ್‌ನ್ಯಾಷನಲ್ ಸಂಸ್ಥೆಯ ಜಿಲ್ಲೆ 317 `ಎಫ್' ರ ವಾರ್ಷಿಕ ಪದವಿ ಸ್ವೀಕಾರ ಸಮಾರಂಭವನ್ನು ಜುಲೈ 21ರಂದು ವಿಜಯನಗರದ ಬಂಟರ ಸಂಘದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ' ಎಂದು 317 `ಎಫ್' ರ ಜಿಲ್ಲಾ ಗವರ್ನರ್ ಆರ್. ಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಅಂಗವಾಗಿ ಬಡತನ ರೇಖೆಗಿಂತ ಕೆಳಗಿರುವ 106 ಮಂದಿ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು ಎಂದು ಹೇಳಿದರು.

ತಾಂತ್ರಿಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 75 ವಿದ್ಯಾರ್ಥಿಗಳಿಗೆ ರೂ.10 ಸಾವಿರ ಮೊತ್ತದ ವಿದ್ಯಾರ್ಥಿ ವೇತನ ನೀಡಲಾಗುವುದು. 65 ಮಂದಿ ಅಂಗವಿಕಲರಿಗೆ ಕೃತಕ ಕಾಲು ವಿತರಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.