ADVERTISEMENT

ಲಾರಿ ಡಿಕ್ಕಿ: ಸಾವು

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2012, 19:30 IST
Last Updated 10 ಮಾರ್ಚ್ 2012, 19:30 IST

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾಮಾಕ್ಷಿಪಾಳ್ಯ ಸಮೀಪದ ಸುಂಕದ ಕಟ್ಟೆ ಬಸ್ ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದೆ.

ಮೂಲತಃ ಬಿಜಾಪುರದವರಾದ ಕಿರಣ್ ಜಿ ಹಿರೆಮಠ್(25) ಮೃತಪಟ್ಟವರು. ಅವರು ತನ್ನ ತಂದೆ ಗುರುಪಾದ ಹಿರೆಮಠ್‌ರೊಂದಿಗೆ ಮಾಗಡಿ ರಸ್ತೆಯ ಅಂಜನಾನಗರದಲ್ಲಿ ವಾಸಿಸುತ್ತಿದ್ದರು. ಸಾಫ್ಟ್‌ವೇರ್ ಕಂಪೆನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಕಿರಣ್, ಬೆಳಿಗ್ಗೆ 12.45ಕ್ಕೆ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ಹೋಗುವಾಗ ದುರ್ಘಟನೆ ನಡೆದಿದೆ.

ಜಲ್ಲಿ ತುಂಬಿದ್ದ ಲಾರಿ ಹಿಂದಿನಿಂದ ಬಂದು ಅವರಿಗೆ ಡಿಕ್ಕಿ ಹೊಡೆದಾಗ ಕೆಳಗೆ ಬಿದ್ದ ಕಿರಣ್ ಮೇಲೆ ಲಾರಿಯ ಮುಂದಿನ ಚಕ್ರ ಹರಿದು ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದರು.

ಕಿರಣ್ ಸ್ನೇಹಿತ ಮಾದೇಶ್ ಎಂಬುವರು ದೂರು ನೀಡಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದು, ವಾಹನವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.