ADVERTISEMENT

‘ಲೆಕ್ಕಪತ್ರ ಸಲ್ಲಿಕೆ ಕಡ್ಡಾಯವಲ್ಲ’

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2017, 19:30 IST
Last Updated 6 ಅಕ್ಟೋಬರ್ 2017, 19:30 IST

ಬೆಂಗಳೂರು: ‘ಲೋಕಾಯುಕ್ತ ಸಂಸ್ಥೆ ರಾಜ್ಯ ಸರ್ಕಾರಕ್ಕೆ ವಾರ್ಷಿಕ ವರದಿ ಸಲ್ಲಿಸುವುದು ಕಡ್ಡಾಯವಲ್ಲ’ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

‘ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 12(6 )ರ ಪ್ರಕಾರ ಲೋಕಾಯುಕ್ತ ಸಂಸ್ಥೆಯ ಸಮಗ್ರ ವರದಿಯನ್ನು ರಾಜ್ಯಪಾಲರಿಗೆ ಸಲ್ಲಿಸಬೇಕು’ ಎಂದೂ ಮೂಲಗಳು ಸ್ಪಷ್ಟಪಡಿಸಿವೆ.

ಆರು ವರ್ಷಗಳಿಂದ ಲೆಕ್ಕಪರಿಶೋಧನಾ ವರದಿ ಸಲ್ಲಿಸದ ಲೋಕಾಯುಕ್ತ ರಿಜಿಸ್ಟ್ರಾರ್ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಅನುಮತಿ ಕೋರಿ ವಿಧಾನ ಮಂಡಲಗಳ ಕಾಗದ ಪತ್ರಗಳ ಸಮಿತಿ ಅಧ್ಯಕ್ಷ ಸಾ.ರಾ. ಮಹೇಶ್‌  ಇದೇ 3ರಂದು ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರಿಗೆ ಪತ್ರ ಬರೆದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.