ಬೆಂಗಳೂರು: ಏ.17 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಪೂರ್ವಭಾವಿಯಾಗಿ ಸಿದ್ಧತೆ ನಡೆಸಿದ್ದು, ಮತದಾರರಲ್ಲಿ ಮತದಾನ ಮಾಡುವಂತೆ ಪ್ರೇರೇಪಿಸಲು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಜಾಗೃತಿ ಕಾರ್ಯಕ್ರಮಕ್ಕಾಗಿ ಸಮಿತಿಯನ್ನು ರಚಿಸಿದ್ದು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ
(ಚಿಕ್ಕಬಳ್ಳಾಪುರ ಕ್ಷೇತ್ರ) ಯಲ್ಲಿ ಹಮ್ಮಿಕೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಇಲಾಖೆಯ ವತಿಯಿಂದ ಇಲಾಖೆಯ ಆಯ್ದ ಹೆದ್ದಾರಿ ಫಲಕಗಳಿಗೆ ಮತದಾನ ಜಾಗೃತಿ ಕುರಿತು ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ ಹಾಗೂ ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ, ನೆಲಮಂಗಲ ತಾಲ್ಲೂಕುಗಳಲ್ಲಿರುವ ಕೊಳಚೆಪ್ರದೇಶ ಹಾಗೂ ಕಾಲೋನಿಗಳಲ್ಲಿ ಬೀದಿ ನಾಟಕ, ಸಂಗೀತ, ಕರಪತ್ರಗಳನ್ನು ಹಂಚುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.