ಮಹದೇವಪುರ: `ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆ ನಡೆಸಬೇಕು' ಎಂದು ಕೆ.ಆರ್.ಪುರ ಶಾಸಕ ಬಿ.ಎ.ಬಸವರಾಜು ಸಲಹೆ ನೀಡಿದರು.
ಕ್ಷೇತ್ರದ ಕಾಟಂನಲ್ಲೂರು ಗ್ರಾಮದಲ್ಲಿ ಭಾನುವಾರ ಬ್ಲಾಕ್ ಕಾಂಗ್ರೆಸ್ ಸಮಿತಿಯು ಏರ್ಪಡಿಸಿದ್ದ ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕೆಪಿಸಿಸಿ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ, `ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ಯೋಜನೆಗಳನ್ನು ಜನತೆಗೆ ಮನದಟ್ಟು ಮಾಡುವ ಕಾರ್ಯದಲ್ಲಿ ತೊಡಗಬೇಕು' ಎಂದರು.
ಈ ಸಂದರ್ಭದಲ್ಲಿ ಮಹದೇವಪುರ ನಗರಸಭಾ ಮಾಜಿ ಅಧ್ಯಕ್ಷ ಪಿ.ರಾಜಣ್ಣ, ಡಿಸಿಸಿ ಸದಸ್ಯ ಗುಂಡೂರು ಕೃಷ್ಣಪ್ಪ, ಯಲ್ಲಪ್ಪ, ನಾಗರಾಜ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.