ಬೆಂಗಳೂರು: ‘ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರಿಗೆ ಹೆಚ್ಚಿನ ಅಧಿಕಾರವನ್ನು ನೀಡಬೇಕು’ ಎಂದು ಕನ್ನಡ ವೇದಿಕೆಯ ಅಧ್ಯಕ್ಷ ಕೆ.ಪ್ರಭಾಕರ ರೆಡ್ಡಿ ಒತ್ತಾಯಿಸಿದರು.
‘ಸಂತೋಷ್ ಹೆಗ್ಡೆ ಅವರ ಅಧಿಕಾರವಧಿ ಆಗಸ್ಟ್ ತಿಂಗಳಿನಲ್ಲಿ ಕೊನೆಗೊಳ್ಳುತ್ತದೆ. ಆದ್ದರಿಂದ ಅವರನ್ನೂ ಇನ್ನೂ ಮೂರು ವರ್ಷಗಳಿಗೆ ವಿಸ್ತರಿಸಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.
’ಅಣ್ಣ ಹಜಾರೆ ಅವರ ಭ್ರಷ್ಟ್ರಾಚಾರ ವಿರೋಧಿ ಆಂದೋಲನಕ್ಕೆ ವೇದಿಕೆಯು ಪೂರ್ಣ ಬೆಂಬಲ ನೀಡುತ್ತದೆ. ಇದಕ್ಕೆ ಪೂರಕವಾಗಿ ಮೇ 1 ಕಾರ್ಮಿಕ ದಿನಾಚರಣೆಯಂದು ಸಹಿ ಸಂಗ್ರಹಣಾ ಚಳವಳಿಯನ್ನು ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ಆರಂಭಿಸಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಲಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.