ADVERTISEMENT

ಲೋಕಾಯುಕ್ತರ ಮೇಲಿನ ಹಲ್ಲೆ ಪ್ರಕರಣ: ಡಿಸಿಪಿ ಯೋಗೇಶ್ ಅಮಾನತು

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2018, 17:04 IST
Last Updated 8 ಮಾರ್ಚ್ 2018, 17:04 IST
ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ   

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್‌ಶೆಟ್ಟಿಗೆ ಚಾಕು ಇರಿತ ಪ್ರಕರಣದಲ್ಲಿ ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಯೋಗೇಶ್ ಅವರನ್ನು ಅಮಾನತು ಮಾಡಲಾಗಿದೆ.

ಲೋಕಾಯುಕ್ತ ಕಚೇರಿಯ ಭದ್ರತಾ ವೈಫಲ್ಯದಿಂದಲೇ ವಿಶ್ವನಾಥ್ ಶೆಟ್ಟಿ ಅವರ ಹತ್ಯೆಗೆ ಯತ್ನ ನಡೆದಿದೆ ಎಂದು ‌ಬೆಂಗಳೂರು ಪೊಲೀಸ್ ಕಮಿಷನರ್ ಟಿ. ಸುನೀಲ್‌ಕುಮಾರ್ ಗೃಹ ಇಲಾಖೆಗೆ ಗುರುವಾರ ವರದಿ ಕೊಟ್ಟಿದ್ದರು. ಅದನ್ನು ಆಧರಿಸಿ ಡಿಸಿಪಿ ಯೋಗೇಶ್ ಅಮಾನತಿಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT