
ಪ್ರಜಾವಾಣಿ ವಾರ್ತೆಬೆಂಗಳೂರು: ನಗರ ಸಿವಿಲ್ ಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲೋಕಾಯುಕ್ತ ವಿಶೇಷ ಕೋರ್ಟನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ ಮಾಡಿ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಸೋಮವಾರದಿಂದಲೇ ಇದು ಜಾರಿಗೆ ಬರಲಿದೆ.
ವಕೀಲರು, ಪೊಲೀಸರು ಹಾಗೂ ಮಾಧ್ಯಮ ಪ್ರತಿನಿಧಿಗಳ ಮಧ್ಯೆ ಕಳೆದ ವಾರ ನಡೆದ ಜಟಾಪಟಿಯ ಹಿನ್ನೆಲೆಯಲ್ಲಿ, ಭದ್ರತಾ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಲೋಕಾಯುಕ್ತ ಕೋರ್ಟ್‌ನಲ್ಲಿ ಗಣ್ಯ ವ್ಯಕ್ತಿಗಳ ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಕೋರ್ಟ್ ಸ್ಥಳಾಂತರ ಮಾಡಲಾಗಿದೆ.
ಲೋಕಾಯುಕ್ತ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ವಕೀಲ ಪಂಚಾಕ್ಷರಿ ಹಿರೇಮಠ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.