ADVERTISEMENT

ವಕೀಲರಿಂದ ದೂರು

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2012, 19:40 IST
Last Updated 4 ಮಾರ್ಚ್ 2012, 19:40 IST

ಬೆಂಗಳೂರು: ನಗರದ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹಾಗೂ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಕೀಲರು ದೂರು ನೀಡಿದ್ದಾರೆ.

ಘಟನೆಯಲ್ಲಿ ಪೊಲೀಸರು ವಕೀಲರಿಗೆ ಹೊಡೆದು ಗಾಯಗೊಳಿಸಿದ್ದಾರೆ ಮತ್ತು ನಮ್ಮ ವಾಹನಗಳನ್ನು ಜಖಂ ಮಾಡಿದ್ದಾರೆ ಎಂದು ಐದು ವಕೀಲರು ಪ್ರತ್ಯೇಕ ದೂರು ನೀಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಕೆ.ಆರ್ ವೃತ್ತದ ಕಡೆಯಿಂದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ನಡೆದುಕೊಂಡು ಹೋಗವಾಗ, ಮಾಧ್ಯಮ ಪ್ರತಿನಿಧಿಗಳು ವಕೀಲರಿಗೆ ಅಡ್ಡಗಟ್ಟಿ ಹೊಡೆಯುತ್ತಿದ್ದರು ಹಾಗೂ ನಮ್ಮ ವಾಹನಗಳನ್ನು ಕಲ್ಲಿನಿಂದ ಹೊಡೆದು ಜಖಂ ಮಾಡುತ್ತಿದ್ದರು ಎಂದು ವಕೀಲರೊಬ್ಬರು ಭಾನುವಾರ ದೂರು ನೀಡಿದ್ದಾರೆ. ಪೊಲೀಸರು ವಾಹನಗಳನ್ನು ಜಖಂ ಮಾಡಿರುವ ದೃಶ್ಯಗಳು ಯೂಟ್ಯೂಬ್‌ನಲ್ಲಿ ಪ್ರಸಾರವಾಗಿವೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ವಕೀಲರು ದೂರಿನಲ್ಲಿ ಆಗ್ರಹಿಸಿದ್ದಾರೆ. ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.