ADVERTISEMENT

ವಚನ ಸಾಹಿತ್ಯ ಸಮ್ಮೇಳನ ಆಗಸ್ಟ್‌ನಲ್ಲಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2013, 19:59 IST
Last Updated 17 ಜೂನ್ 2013, 19:59 IST

ಬೆಂಗಳೂರು:  `ಅಖಿಲ ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ವತಿಯಿಂದ ರಾಜ್ಯ ಮಟ್ಟದ ಎರಡನೇ ವಚನ ಸಾಹಿತ್ಯ ಸಮ್ಮೇಳನವನ್ನು ಆಗಸ್ಟ್ 17, 18 ಮತ್ತು 19ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ' ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಹಿರಿಯ ರಂಗನಟ ಮಾಸ್ಟರ್ ಹಿರಣ್ಣಯ್ಯ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಎಚ್.ಎಸ್. ದೊರೆಸ್ವಾಮಿ, ಪ್ರೊ.ಜಿ. ವೆಂಕಟಸುಬ್ಬಯ್ಯ, ಸಾಹಿತಿ ಡಾ.ಕಮಲಾ ಹಂಪನಾ ಮತ್ತಿತರರನ್ನು ಸ್ವಾಗತ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT