ಬೆಂಗಳೂರು: ಮಂಗಳೂರಿನ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ವಾಹಿನಿಯ ವರದಿಗಾರ ನವೀನ್ ಸೂರಿಂಜೆ ಅವರನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳ ಸದಸ್ಯರು ಪುರಭವನದ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
`ಹುಟ್ಟು ಹಬ್ಬದ ಆಚರಣೆಯಲ್ಲಿ ತೊಡಗಿದ್ದ ಯುವಕ, ಯುವತಿಯರ ಮೇಲೆ ಕೆಲ ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿದ್ದನ್ನು ವರದಿ ಮಾಡುವ ಸಲುವಾಗಿ ನವೀನ್ ಅಲ್ಲಿಗೆ ಹೋಗಿದ್ದರು. ಆದರೆ, ಈ ಕೃತ್ಯದಲ್ಲಿ ನವೀನ್ ಕೂಡ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಪೊಲೀಸರು, ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಈ ಕೂಡಲೇ ಅವರನ್ನು ಬಿಡುಗಡೆ ಮಾಡದಿದ್ದರೆ ಮುಂದೆ ನಡೆಯುವ ಹೋರಾಟಕ್ಕೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ~ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.