ಬೆಂಗಳೂರು: ಬಿಎಂಟಿಸಿ ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರ ಮೂಡ್ನಾಕೂಡು ಚಿನ್ನಸ್ವಾಮಿ ಅವರನ್ನು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ವರ್ಗಾವಣೆ ಮಾಡಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ವಜಾ ಮಾಡಿದೆ.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ಅವರಿದ್ದ ಏಕಸದಸ್ಯ ಪೀಠ, ಬಿಎಂಟಿಸಿ ಮುಖ್ಯ ಲೆಕ್ಕಾಧಿಕಾರಿಯನ್ನು ವರ್ಗಾವಣೆ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಮಾತ್ರ ಇದೆ ಎಂದು ಹೇಳಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.