ADVERTISEMENT

ವಾಂತಿ-ಭೇದಿ: 6 ವಿದ್ಯಾರ್ಥಿಗಳು ಅಸ್ವಸ್ಥ

ಬಿಸಿಯೂಟ ಸೇವನೆ ಬಳಿಕ ನಡೆದ ಘಟನೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2013, 20:21 IST
Last Updated 12 ಜೂನ್ 2013, 20:21 IST

ಹೊಸಕೋಟೆ: ತಾಲ್ಲೂಕಿನ ಬೈಲನರಸಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವನೆ ಮಾಡಿದ ವಾಂತಿ ಭೇದಿಯಾಗಿ ಆರು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಬುಧವಾರ ನಡೆದಿದೆ.

ಮಕ್ಕಳನ್ನು ಹೊಸಕೋಟೆ ಬಳಿಯ ಖಾಸಗಿ ಆಸ್ಪತ್ರೆಗೆ ಒಳರೋಗಿಗಳಾಗಿ ದಾಖಲಿಸಿದ್ದು ಅವರು ಚೇತರಿಸಿಕೊಂಡಿದ್ದಾರೆ. ಅಲ್ಲದೆ ಊಟ ಸೇವನೆ ಮಾಡಿದ ಇತರ 167 ವಿದ್ಯಾರ್ಥಿಗಳನ್ನೂ ತಪಾಸಣೆ ನಡೆಸಲಾಯಿತು. ಖಾಸಗಿ ಸಂಸ್ಥೆಯೊಂದು ಶಾಲೆಗೆ ಊಟ ಸರಬರಾಜು ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.