ನೆಲಮಂಗಲ: ಪಟ್ಟಣದ ಬಸವಣ್ಣ ದೇವರ ಮಠದ ಶ್ರೀ ಬಸವೇಶ್ವರ ಆಂಗ್ಲ ಶಾಲೆಯ ವಾರ್ಷಿಕೋತ್ಸವವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ.ಟಿ.ಮೂರ್ತಿ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಉಪಸ್ಥಿತರಿದ್ದರು. ಪುರಸಭೆ ಅಧ್ಯಕ್ಷ ಎ.ಪಿಳ್ಳಪ್ಪ ಕಳೆದ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ಸಂತೋಷ್‌ಗೆ ಚಿನ್ನದ ಪದಕ, ರಂಜಿತ್ ಹಾಗೂ ಯಶಸ್ವಿನಿಗೆ ಬೆಳ್ಳಿ ಪದಕಗಳನ್ನು ನೀಡಿ ಗೌರವಿಸಿದರು. ಪುರಸಭೆ ಉಪಾಧ್ಯಕ್ಷ ಎನ್.ಪಿ.ಹೇಮಂತಕುಮಾರ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಪಿ.ಆನಂದ್, ಸಬ್‌ಇನ್‌ಸ್ಪೆಕ್ಟರ್ ರಂಗಸ್ವಾಮಿ, ಮುಖ್ಯ ಶಿಕ್ಷಕ ಎಚ್.ಎನ್.ಚಂದ್ರಶೇಖರಯ್ಯ ವೇದಿಕೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.