ADVERTISEMENT

ವಾಹನಗಳ ಬಹಿರಂಗ ಹರಾಜು

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2012, 19:30 IST
Last Updated 15 ಫೆಬ್ರುವರಿ 2012, 19:30 IST

ಬೆಂಗಳೂರು: ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 36 ದ್ವಿಚಕ್ರ ಮತ್ತು 3 ನಾಲ್ಕು ಚಕ್ರದ ವಾಹನಗಳನ್ನು ಫೆ. 18 ರಂದು ಬೆಳಿಗ್ಗೆ 11 ಗಂಟೆಗೆ ಠಾಣೆಯ ಆವರಣದಲ್ಲಿ ಬಹಿರಂಗ ಹರಾಜು ಹಾಕಲಾಗುತ್ತದೆ.

ಸಾರ್ವಜನಿಕರು ಮುಂಗಡ ಠೇವಣಿಯಾಗಿ ಹಣ ಪಾವತಿಸುವ ಮೂಲಕ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿ ವಾಹನಗಳನ್ನು ಖರೀದಿಸಬಹುದು ಎಂದು  ಸುಬ್ರಮಣ್ಯಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.