ADVERTISEMENT

ವಿಚಾರ ಸಾಹಿತ್ಯವೂ ಮುಖ್ಯ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 19:15 IST
Last Updated 1 ಅಕ್ಟೋಬರ್ 2012, 19:15 IST

ಬೆಂಗಳೂರು: `ವಿಚಾರ ಸಾಹಿತ್ಯ ಮತ್ತು ಪೂರಕ ಸಾಹಿತ್ಯಗಳು ಒಂದು ಭಾಷೆಯನ್ನು ಶ್ರೀಮಂತಗೊಳಿಸುತ್ತದೆ. ಒಂದು ಭಾಷೆಗೆ ಸೃಜನಶೀಲ ಸಾಹಿತ್ಯದಷ್ಟೇ ವಿಚಾರ ಸಾಹಿತ್ಯವೂ ಮುಖ್ಯ~ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೊ.ರು. ಚನ್ನಬಸಪ್ಪ ಅಭಿಪ್ರಾಯಪಟ್ಟರು.

 ಕರ್ನಾಟಕ ಸಾಹಿತ್ಯ ಪರಿಷತ್ತು ಪ್ರಕಟಿಸಿರುವ ಟಿ.ವಿ. ವೆಂಕಟರಮಣಯ್ಯ ಅವರ ಸಂಪಾದಿತ `ಸೂಕ್ತಿ ಭಂಡಾರ~ ಪುಸ್ತಕವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು, `ಈ ಸಂಗ್ರಹದಲ್ಲಿರುವ ಮೂರು ಸಾವಿರಕ್ಕೂ ಹೆಚ್ಚು ಸೂಕ್ತಿಗಳು ಜೀವನಕ್ಕೆ ಮಾರ್ಗದರ್ಶನ ನೀಡುತ್ತವೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಪರಿಷತ್ತಿನ ಅಧ್ಯಕ್ಷ ಡಾ.ಸಿ. ವೀರಣ್ಣ ವಹಿಸಿದ್ದರು. ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಲ್.ಎನ್. ಮುಕುಂದರಾಜ್ ಸ್ವಾಗತಿಸಿದರು. ಸಂಘಟನಾ ಕಾರ್ಯರ್ಶಿ ಬಿ.ಎ. ರಾಮಯ್ಯ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.