ADVERTISEMENT

`ವಿಜ್ಞಾನ ಕ್ಷೇತ್ರದಲ್ಲಿ ತೊಡಗಿಕೊಳ್ಳಿ'

​ಪ್ರಜಾವಾಣಿ ವಾರ್ತೆ
Published 18 ಜನವರಿ 2013, 19:59 IST
Last Updated 18 ಜನವರಿ 2013, 19:59 IST
ನಾಗವಾರದ ಎಸ್.ವಿ.ಎನ್. ಆಂಗ್ಲ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ `ಸಂಹಿತ- 2013' ವಿಜ್ಞಾನ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದ್ದ ಬಿಬಿಎಂಪಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಗೋವಿಂದರಾಜು, ವಿದ್ಯಾರ್ಥಿಗಳಿಂದ ವಿಜ್ಞಾನದ ಮಾದರಿಗಳ ಬಗ್ಗೆ ಮಾಹಿತಿ ಪಡೆದರು. ಪ್ರಾಂಶುಪಾಲ ಕೆ.ಸುಬ್ಬರಾಜು ಮೊದಲಾದವರು ಚಿತ್ರದಲ್ಲಿದ್ದಾರೆ

ಯಲಹಂಕ:  ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಹೆಚ್ಚಿನ ಜ್ಞಾನವನ್ನು ಸಂಪಾದಿಸುವ ಮೂಲಕ ಹೊಸ ಹೊಸ ಸಂಶೋಧನೆಗಳನ್ನು ಮಾಡಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಡಿ.ಬಿ. ಗಾರೆ ಹೇಳಿದರು.

ನಾಗವಾರದ ಎಸ್.ವಿ.ಎನ್. ಆಂಗ್ಲ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ `ಸಂಹಿತ- 2013' ವಿಜ್ಞಾನ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯವಶ್ಯ ಎಂದರು. `ಮಕ್ಕಳು ಪ್ರಾಥಮಿಕ ಶಾಲಾ ಹಂತದಿಂದಲೇ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳುವ ಆಸಕ್ತಿ ಬೆಳೆಸಿಕೊಳ್ಳಬೇಕು. ಅದರಿಂದ ಅವರ ಭವಿಷ್ಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ' ಎಂದು ತಿಳಿಸಿದರು.

ನಿವೃತ್ತ ಪ್ರಾಧ್ಯಾಪಕ ಪ್ರೊ.ವೆಂಕಟೇಶಮೂರ್ತಿ, ಮುಖ್ಯ ಶಿಕ್ಷಕಿ ಕೆ.ಅನಿತಾ, ಆರ್.ಟಿ.ನಗರ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಗಣಪತಿ ಡಿ.ಹೆಗಡೆ  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.