ADVERTISEMENT

ವಿಜ್ಞಾನ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2011, 19:30 IST
Last Updated 3 ಮಾರ್ಚ್ 2011, 19:30 IST

ಬೆಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇತ್ತೀಚೆಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ನಗರದ ವಿವಿಧೆಡೆ ಆಯೋಜಿಸಿತ್ತು. ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ‘ಲಿಂಗ ಸಮಾನತೆಯಿಂದ ಶಾಂತಿ ಹಾಗೂ ಸಮೃದ್ಧಿ’ ವಿಷಯದ ಕುರಿತು ಚರ್ಚೆ ಹಮ್ಮಿಕೊಳ್ಳಲಾಗಿತ್ತು. ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ್ ಅವರು ಅತಿಥಿಗಳಾಗಿ ಭಾಗವಹಿಸಿದ್ದರು.

ಮೈಲಸಂದ್ರದ ಜೆಎಸ್‌ಎಸ್ ತಾಂತ್ರಿಕ ಅಧ್ಯಯನ ಅಕಾಡೆಮಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಡಾ.ಕೆ.ಎಸ್.ರಂಗಪ್ಪ ಪಾಲ್ಗೊಂಡರು. ಜಯನಗರದ ಆರ್.ವಿ. ಪ್ರಶಿಕ್ಷಣ ತರಬೇತಿ ಕಾಲೇಜಿನ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎ.ಎನ್.ಯಲ್ಲಪ್ಪರೆಡ್ಡಿ, ಆರ್.ವಿ.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎಸ್.ಭಾಸ್ಕರ್ ಭಾಗವಹಿಸಿದ್ದರು. ಎಂ.ಎಸ್.ರಾಮಯ್ಯ ಸ್ಮಾರಕ ಆಸ್ಪತ್ರೆಯು ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪೃಥ್ವೀಶ್ ಹಾಗೂ ಡಾ. ಪ್ರಕಾಶ್ ಸಿ.ರಾವ್ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.