ಬೆಂಗಳೂರು: ರಾಜಾಜಿನಗರದ 2ನೇ ಹಂತದ 14 ವರ್ಷದ ವಿದ್ಯಾರ್ಥಿನಿಯನ್ನು ಅಪಹರಿಸಿದ್ದ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮನೆ ಸಮೀಪದ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ, ಬೆಳಿಗ್ಗೆ ಎಂಟು ಗಂಟೆಗೆ ಟ್ಯೂಷನ್‌ಗೆ ಹೋಗುತ್ತಿದ್ದಳು. ಈ ವೇಳೆ ಕಾರಿನಲ್ಲಿ ಬಂದ ಕೆಲ ದುಷ್ಕರ್ಮಿಗಳು ಆಕೆಯನ್ನು ಅಪಹರಿಸಿದ್ದರು. ಪೋಷಕರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ರಾಜಾಜಿನಗರ ಪೊಲೀಸರು, ಸಂಜೆ ವೇಳೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪರಿಚಿತರೇ ಹಣಕ್ಕಾಗಿ ಈ ಕೃತ್ಯ ಎಸಗಿರುವ ಬಗ್ಗೆ ಶಂಕೆ ಇತ್ತು. ವಿಚಾರಣೆ ವೇಳೆ ಪೋಷಕರು ನೀಡಿದ ಮಾಹಿತಿಯಿಂದ ಆರೋಪಿಗಳ ಸುಳಿವು ಸಿಕ್ಕಿತು ಎಂದು ಹೇಳಿರುವ ಪೊಲೀಸರು, ಆರೋಪಿಗಳ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.