ADVERTISEMENT

ವಿದ್ಯಾರ್ಥಿ ವೇತನ ವಿತರಣೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2011, 19:30 IST
Last Updated 15 ಏಪ್ರಿಲ್ 2011, 19:30 IST

ರಾಜರಾಜೇಶ್ವರಿನಗರ:‘ಹಾಲು ಉತ್ಪಾದಕರ ಸಹಕಾರ ಸಂಘಗಳ ಎಲ್ಲಾ ಸದಸ್ಯರ ಮಕ್ಕಳ ಶಿಕ್ಷಣಕ್ಕೆ ಧನಸಹಾಯ ಹಾಗೂ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಇದರ ಸದುಪಯೋಗ ಪಡೆಯಬೇಕು’ ಎಂದು ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಮಹೇಶ್‌ಚಂದ್ರ ಕರೆ ನೀಡಿದರು.ಬೆಂಗಳೂರು ಹಾಲು ಒಕ್ಕೂಟ ಮತ್ತು ಬಮೂಲ್ ಟ್ರಸ್ಟ್ ವತಿಯಿಂದ ಬೆಂಗಳೂರು ದಕ್ಷಿಣ ತಾಲ್ಲೂಕಿನ ಹಾಲು ಉತ್ಪಾದಕರ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ವಿತರಣೆ ಮಾಡಿ ಅವರು ಮಾತನಾಡಿದರು. ‘ಪ್ರತಿಭಾವಂತ ಮಕ್ಕಳಿಗೆ ಎಲ್ಲ ರೀತಿಯ ನೆರವನ್ನು ಒಕ್ಕೂಟ ನೀಡಲಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಪ್ರಗತಿ ಹೊಂದಬೇಕು’ ಎಂದು ಅವರು ಕರೆ ನೀಡಿದರು.

 ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸಿ.ಮಂಜುನಾಥ್ ಮಾತನಾಡಿ ‘ಒಕ್ಕೂಟವು ರೂ 31ಕೋಟಿ ಲಾಭ ಗಳಿಸಿದ್ದು ಇದನ್ನು ರೈತರ ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ವಿನಿಯೋಗಿಸಲಾಗುವುದು. ಮುಂದಿನ ದಿನಗಳಲ್ಲಿ ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರಿಗೆ ವೇತನ ಹೆಚ್ಚಳ, ಆರೋಗ್ಯವಿಮೆ ಜಾರಿಗೆ ತರಲಾಗುವುದು’ ಎಂದು ತಿಳಿಸಿದರು.
ವ್ಯವಸ್ಥಾಪಕ ನಿರ್ದೇಶಕ ಡಾ.ಲಕ್ಷ್ಮಣರೆಡ್ಡಿ, ಉಪ ವ್ಯವಸ್ಥಾಪಕರಾದ ಡಾ.ಜನಾರ್ದನ ರೆಡ್ಡಿ, ಡಾ. ಕೃಷ್ಣಮೂರ್ತಿ, ಡಾ.ಮಂಜುನಾಥ್, ಡಾ.ಜವರಯ್ಯ, ರಾವುಗೋಡ್ಲು ಕೋದಂಡರಾಮಯ್ಯ, ಎ.ಕೇಶವ ಉಪ ವ್ಯವಸ್ಥಾಪಕ ಸುಬ್ಬರಾಯಪ್ಪ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.