ADVERTISEMENT

`ವಿ.ವಿಗಳು ವೈವಿಧ್ಯಪೂರ್ಣ ಶಿಕ್ಷಣದ ತಾಣ'

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2013, 19:59 IST
Last Updated 1 ಏಪ್ರಿಲ್ 2013, 19:59 IST

ಬೆಂಗಳೂರು: `ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಪದವಿಗಳು, ವೃತ್ತಿಪರ ಕೋರ್ಸ್‌ಗಳಂತೆ ಬೆಳೆದು ನಿಂತಿರುವುದು ಉತ್ತಮ ಬೆಳವಣಿಗೆಯ ಸಂಕೇತವಾಗಿದೆ' ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಸಿ.ಶರ್ಮಾ ಹೇಳಿದರು.

ಅವರು ಈಚೆಗೆ ಸರ್ಕಾರಿ ಆರ್.ಸಿ.ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ `ಸೃಜನ ಆರ್.ಸಿ. ಹಾಗೂ ಸೃಜನ ಸಂಸ್ಕೃತಿ ವೇದಿಕೆ' ಏರ್ಪಡಿಸಿದ್ದ ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

`ವಿಶ್ವವಿದ್ಯಾಲಯಗಳು ವೈವಿಧ್ಯಪೂರ್ಣ ಶಿಕ್ಷಣ ನೀಡುವ ತಾಣವಾಗಿದ್ದು, ವಿದ್ಯಾರ್ಥಿಗಳು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು' ಎಂದು ಸಲಹೆ ನೀಡಿದರು. ಕಾಲೇಜಿನ ಪ್ರಾಚಾರ್ಯ ಡಾ.ವೇಣುಗೋಪಾಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಡಾ.ವಿಶ್ವಮೂರ್ತಿ ಹಾಜರಿ ದ್ದರು. ಇದೇ ಸಂದರ್ಭ ಕಾಲೇಜಿನ ಸಂಶೋಧನಾ ಕೇಂದ್ರ ಉದ್ಘಾಟಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.