ADVERTISEMENT

ವಿವಿಧ ಅಪರಾಧ ಪ್ರಕರಣ:ರೂ 4.06 ಕೋಟಿ ವಸ್ತು ವಶ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2012, 19:30 IST
Last Updated 7 ಆಗಸ್ಟ್ 2012, 19:30 IST

ಬೆಂಗಳೂರು: ದರೋಡೆ, ವಾಹನ ಕಳವು ಮತ್ತಿತರ ಅಪರಾಧ ಪ್ರಕರಣಗಳನ್ನು ಭೇದಿಸಿರುವ ನಗರದ ಉತ್ತರ ವಿಭಾಗದ ಪೊಲೀಸರು ಸುಮಾರು 4.06 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
`ಸಿಬ್ಬಂದಿ ಒಂದೂವರೆ ತಿಂಗಳಲ್ಲಿ 254 ಅಪರಾಧ ಪ್ರಕರಣಗಳನ್ನು ಪತ್ತೆ ಮಾಡಿ 262 ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 45.30 ಲಕ್ಷ ನಗದು, ಸುಮಾರು ನಾಲ್ಕೂವರೆ ಕೆ.ಜಿ ಚಿನ್ನಾಭರಣ, 15 ಕೆ.ಜಿ ಬೆಳ್ಳಿ ವಸ್ತು, ವಾಹನಗಳು, ಲ್ಯಾಪ್‌ಟಾಪ್, ಕಂಪ್ಯೂಟರ್ ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ~ ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪೊಲೀಸರು ವಶಪಡಿಸಿಕೊಂಡಿದ್ದ ವಸ್ತುಗಳನ್ನು ಅವುಗಳ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ.ಸುನಿಲ್‌ಕುಮಾರ್, ಅಪರಾಧ (ಪಶ್ಚಿಮ) ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಪ್ರಣಬ್ ಮೊಹಾಂತಿ, ಉತ್ತರ ವಿಭಾಗದ ಡಿಸಿಪಿ ಎಚ್.ಎಸ್.ರೇವಣ್ಣ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.