ADVERTISEMENT

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 15 ಜನವರಿ 2012, 20:05 IST
Last Updated 15 ಜನವರಿ 2012, 20:05 IST

ಬೆಂಗಳೂರು: ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್) ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್‌ನ (ಐಆರ್‌ಬಿ) ಕಾನ್‌ಸ್ಟೇಬಲ್ ಹಾಗೂ ಎಸ್‌ಐ ಹುದ್ದೆ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಬೆಂಗಳೂರು, ಬೆಳಗಾವಿ, ಮೈಸೂರು, ಗುಲ್ಬರ್ಗ, ಮಂಗಳೂರು ಹಾಗೂ ಶಿವಮೊಗ್ಗದ ಕಚೇರಿಗಳಲ್ಲಿ ಜ.16ರಿಂದ ಅರ್ಜಿ ವಿತರಿಸಲಾಗುತ್ತದೆ. ಅಭ್ಯರ್ಥಿಗಳು ಫೆ.15ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಮತ್ತಿತರ ಮಾಹಿತಿಗೆ ಇಲಾಖೆಯ ಡಿಡಿಡಿ..ಜಟ.ಜ್ಞಿ ವೆಬ್‌ಸೈಟ್ ವಿಳಾಸವನ್ನು ಸಂಪರ್ಕಿಸುವಂತೆ ಅಧಿಕಾರಿಗಳು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.