ADVERTISEMENT

ವಿಶ್ವ ಕುಂಚಿಟಿಗರ ಮಹಾ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2012, 19:30 IST
Last Updated 25 ಏಪ್ರಿಲ್ 2012, 19:30 IST

ಬೆಂಗಳೂರು: ವಿಶ್ವ ಕುಂಚಿಟಿಗರ ಮಹಾ ಸಮ್ಮೇಳನ ಸಮಿತಿಯು ಏಪ್ರಿಲ್ 27 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಅರಮನೆ ಮೈದಾನದಲ್ಲಿ ವಿಶ್ವ ಕುಂಚಿಟಿಗರ ಮಹಾ ಸಮ್ಮೇಳನವನ್ನು ಆಯೋಜಿಸಿದೆ.

ಸಮ್ಮೇಳನದಲ್ಲಿ ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಒರಿಸ್ಸಾ ಸೇರಿದಂತೆ ವಿವಿಧ ರಾಜ್ಯಗಳ ಕುಂಚಿಟಿಗ ಜನಾಂಗದವರು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಎನ್.ದೇವರಾಜಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸುಗಮ ಸಂಗೀತ, ಹಾಸ್ಯೋತ್ಸವ, ಜನಪದ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ, ಪ್ರಧಾನ ಸಂಚಾಲಕ ಟಿ.ರಾಮಾಂಜಿನಪ್ಪ, ಡಿ.ಪ್ರಕಾಶ್ ಇತರರು ಉಪಸ್ಥಿತರಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.