ADVERTISEMENT

ವಿಶ್ವ ಭೂಮಿ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2013, 20:18 IST
Last Updated 22 ಏಪ್ರಿಲ್ 2013, 20:18 IST
ಭಾರತೀಯ ಸಮಾಜ ಸೇವಾ ಟ್ರಸ್ಟ್ ನಗರದ ಅಖಿಲ ಕರ್ನಾಟಕ ಮಕ್ಕಳ ಕೂಟದಲ್ಲಿ ಸೋಮವಾರ ಆಯೋಜಿಸಿದ್ದ `ವಿಶ್ವಭೂಮಿ ದಿನಾಚರಣೆ' ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಇನ್ನರ್‌ವೀಲ್ ಕ್ಲಬ್ ಆಫ್ ಬೆಂಗಳೂರು ಸಂಘಟನೆಯ ಪ್ರತಿಭಾ ಪ್ರಭುದೇವ್, ನಟಿ ಜಯಶ್ರೀ, ಟ್ರಸ್ಟ್ ಶಿವಮಲ್ಲು ಇತರರು ಇದ್ದಾರೆ	-ಪ್ರಜಾವಾಣಿ ಚಿತ್ರ
ಭಾರತೀಯ ಸಮಾಜ ಸೇವಾ ಟ್ರಸ್ಟ್ ನಗರದ ಅಖಿಲ ಕರ್ನಾಟಕ ಮಕ್ಕಳ ಕೂಟದಲ್ಲಿ ಸೋಮವಾರ ಆಯೋಜಿಸಿದ್ದ `ವಿಶ್ವಭೂಮಿ ದಿನಾಚರಣೆ' ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಇನ್ನರ್‌ವೀಲ್ ಕ್ಲಬ್ ಆಫ್ ಬೆಂಗಳೂರು ಸಂಘಟನೆಯ ಪ್ರತಿಭಾ ಪ್ರಭುದೇವ್, ನಟಿ ಜಯಶ್ರೀ, ಟ್ರಸ್ಟ್ ಶಿವಮಲ್ಲು ಇತರರು ಇದ್ದಾರೆ -ಪ್ರಜಾವಾಣಿ ಚಿತ್ರ   

ಬೆಂಗಳೂರು:  `ಪರಿಸರ ಕಾಳಜಿಯನ್ನು ವ್ಯಕ್ತಪಡಿಸುವ ಬೇಸಿಗೆ ಶಿಬಿರಗಳಿಗೆ ಹೆಚ್ಚಿನ ಮನ್ನಣೆ ದೊರೆಯಬೇಕು' ಎಂದು ಇನ್ನರ್‌ವೀಲ್ ಕ್ಲಬ್ ಆಫ್ ಬೆಂಗಳೂರು ಸಂಘಟನೆಯ ಪ್ರತಿಭಾ ಪ್ರಭುದೇವ್ ತಿಳಿಸಿದರು.

ಭಾರತೀಯ ಸಮಾಜ ಸೇವಾ ಟ್ರಸ್ಟ್ ನಗರದ ಅಖಿಲ ಕರ್ನಾಟಕ ಮಕ್ಕಳ ಕೂಟದಲ್ಲಿ ಸೋಮವಾರ ಆಯೋಜಿಸಿದ್ದ `ವಿಶ್ವಭೂಮಿ ದಿನಾಚರಣೆ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

`ನೈಸರ್ಗಿಕ ಸಂಪನ್ಮೂಲಗಳ ಮಾರಣ ಹೋಮ ಹಾಗೂ ಅತಿಯಾದ ಮಾಲಿನ್ಯದ ಪ್ರಭಾವದಿಂದಾಗಿ ಭೂಮಿಯಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಈ ಬಗ್ಗೆ ಮುಂದಿನ ಪೀಳಿಗೆಯಲ್ಲಿ ಅರಿವು ಮೂಡಿಸುವ ಅಗತ್ಯವಿದೆ' ಎಂದು ತಿಳಿಸಿದರು.
`ಮಕ್ಕಳಿಗೆ ಸಣ್ಣ ಕತೆಗಳ ಮೂಲಕ ಪರಿಸರ ಸಂರಕ್ಷಣೆ ಮಾಡುವ ಬಗೆಯನ್ನು ನವಿರಾಗಿ ತಿಳಿಸುವ ಅಗತ್ಯವಿದೆ. ಈ ವಿಚಾರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಬೇಕು' ಎಂದು ಹೇಳಿದರು.

ನಟಿ ಜಯಶ್ರೀ,  `ಕಲೆ,ಸಾಹಿತ್ಯ, ಸಂಗೀತ ಸೇರಿದಂತೆ ಪರಿಸರ ಸಂರಕ್ಷಣಾ ಕಾರ್ಯದಲ್ಲಿ ಮಕ್ಕಳನ್ನು ಕಡ್ಡಾಯವಾಗಿ ತೊಡಗಿಸುವತ್ತ ಶಿಕ್ಷಣ ಸಂಸ್ಥೆಗಳು ಹೆಜ್ಜೆ ಇರಿಸಬೇಕಿದೆ. ಕೇವಲ ಪಠ್ಯಚಟುವಟಿಕೆಗಳಿಂದ ವಿದ್ಯಾರ್ಥಿಗಳ ಬೌದ್ಧಿಕ ವಿಕಸನ ಸಾಧ್ಯವಿಲ್ಲ' ಎಂದರು.ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಸಸಿ ವಿತರಿಸಲಾಯಿತು. ಟ್ರಸ್ಟ್‌ನ ಶಿವಮಲ್ಲು  ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.