ಬೆಂಗಳೂರು: ಹೆಸರಘಟ್ಟ ಹೋಬಳಿಯ ಹನಿಯೂರು ಗ್ರಾಮದ ರೈತ ರಾಮೇಗೌಡ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶನಿವಾರ ಬೆಳಿಗ್ಗೆ ಕ್ರಿಮಿನಾಶಕ ಸೇವಿಸಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ಮೃತಪಟ್ಟಿದ್ದಾರೆ.
ಅವರು ದೊಡ್ಡಬಳ್ಳಾಪುರದ ಫೆಡರಲ್ ಮೊಗಲ್ ಬ್ಯಾಂಕಿನಲ್ಲಿ ₹2.5 ಲಕ್ಷ ಸಾಲ ಪಡೆದಿದ್ದರು. ಸಾಲ ತೀರಿಸ ಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
₹5 ಲಕ್ಷ ಪರಿಹಾರ: ನಗರ ಜಿಲ್ಲಾಧಿಕಾರಿ ವಿ.ಶಂಕರ್ ಅವರು ರಾಮೇಗೌಡ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿದ ಅವರು, ‘ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲಾಗುತ್ತದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.