ADVERTISEMENT

ವೀರಶೈವ ಮಹಾಸಭಾದಲ್ಲಿ ಖಂಡ್ರೆ ಅವ್ಯವಹಾರ: ಬೆಲ್ಲದ್ ಆರೋಪ

​ಪ್ರಜಾವಾಣಿ ವಾರ್ತೆ
Published 6 ಜನವರಿ 2012, 19:30 IST
Last Updated 6 ಜನವರಿ 2012, 19:30 IST

ಬೆಂಗಳೂರು: `ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಭೀಮಣ್ಣ ಖಂಡ್ರೆ ಮಹಾಸಭಾದಲ್ಲಿ ಬಹಳಷ್ಟು ಅವ್ಯವಹಾರಗಳನ್ನು ನಡೆಸಿದ್ದಾರೆ~ ಎಂದು ಶಾಸಕ ಚಂದ್ರಕಾಂತ ಬೆಲ್ಲದ್ ಆರೋಪಿಸಿದರು.

 ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಖಂಡ್ರೆ ತಮ್ಮ ಸೇವಾವಧಿ ಮುಗಿದಿದ್ದರೂ ಇನ್ನೂ ಅಧಿಕಾರಾ ವಧಿಯಿದೆ ಎಂದು ಸಾಧಿಸುತ್ತಿದ್ದಾರೆ. ಅಧಿಕಾರವಧಿ ಪೂರ್ಣಗೊಳ್ಳುವುದಕ್ಕಿಂತ 30 ದಿನಗಳು ಮೊದಲು ಚುನಾವಣೆ ಮಾಡಬೇಕಿತ್ತು. ಆದರೆ ಚುನಾವಣೆ ಕೈಗೊಳ್ಳದೆ, ಸಾರ್ವಭೌಮರಾಗಿ ವರ್ತಿಸುತಿದ್ದಾರೆ. ತಮ್ಮ ಪರವಾಗಿರುವವರನ್ನು ಮಾತ್ರ ಆಯಕಟ್ಟಿನ ಸ್ಥಾನದಲ್ಲಿ ಕೂರಿಸಿದ್ದಾರೆ~ ಎಂದು ಆಪಾದಿಸಿದರು.

`ಖಂಡ್ರೆ ಸದಸ್ಯತ್ವ ಶುಲ್ಕ ಪಾವತಿಸಿರುವ ಸುಮಾರು ನಾಲ್ಕು ಸಾವಿರ ಜನರಿಗೆ ಸದಸ್ಯತ್ವ ನೀಡದೆ, ತಮ್ಮ ಬೆಂಬಲಿಗರನ್ನು ಮಾತ್ರ ಸದಸ್ಯರನ್ನಾಗಿ ನೇಮಿಸಿಕೊಂಡಿದ್ದಾರೆ. ಇದರಿಂದ ಮಹಾಸಭೆಯನ್ನು ಅವರ ಸ್ವಾರ್ಥ ಸಾಧನೆಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ~ ಎಂದು ದೂರಿದರು.

`ಈ ಕ್ರಮವನ್ನು ಪರಿಶೀಲಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು~ ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಮಹಾಸಭೆಯ ಮಾಜಿ ಪದಾಧಿಕಾರಿಗಳಾದ ಬಿ.ಎಸ್. ಪರಮಶಿವಯ್ಯ, ಎಚ್.ಎಸ್. ಸಿದ್ದಲಿಂಗಯ್ಯ, ಗಂಗಮ್ಮ ಮತ್ತಿತರರು ಉಪಸ್ಥಿತರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.