ADVERTISEMENT

ವೆಬ್‌ಸೈಟ್‌ಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2012, 19:30 IST
Last Updated 17 ಜನವರಿ 2012, 19:30 IST
ವೆಬ್‌ಸೈಟ್‌ಗೆ ಚಾಲನೆ
ವೆಬ್‌ಸೈಟ್‌ಗೆ ಚಾಲನೆ   

ಬೆಂಗಳೂರು: ನಗರದ ಪಂಪ ಮಹಾಕವಿ ರಸ್ತೆಯಲ್ಲಿರುವ ಅಖಿಲ ಕರ್ನಾಟಕ ಮಕ್ಕಳ ಕೂಟದ ಆಶ್ರಯದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕೂಟದ ನೂತನ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು.

ನೂತನ ವೆಬ್‌ಸೈಟ್ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಎಂ.ವಿ. ರಾಜಶೇಖರನ್, `ರಾಷ್ಟ್ರದ ಭವಿಷ್ಯದ ಪ್ರಜೆಗಳೆನಿಸಿರುವ ಮಕ್ಕಳಿಗೆ ಚಿಕ್ಕಂದಿನಿಂದಲೇ ಪೌಷ್ಟಿಕ ಆಹಾರ ನೀಡುವತ್ತ ಪೋಷಕರು ಗಮನ ನೀಡಬೇಕು~ ಎಂದರು.

`ಉತ್ತಮ ಆರೋಗ್ಯವಿದ್ದರಷ್ಟೇ ಏನನ್ನಾದರೂ ಸಾಧಿಸಲು ಸಾಧ್ಯ. ಹಾಗಾಗಿ ಮಕ್ಕಳಿಗೆ ಆರೋಗ್ಯ ಪಾಲನೆ ಹಾಗೂ ಉತ್ತಮ ವಿಚಾರಗಳ ಬಗ್ಗೆ ಅರಿವು ಮೂಡಿಸಬೇಕು~ ಎಂದು ಹೇಳಿದರು.

ಬಿಬಿಎಂಪಿ ಸದಸ್ಯ ಬಿ.ವಿ. ಗಣೇಶ್, `ಇಂದಿನ ಮಕ್ಕಳು ಯಾವುದೇ ವಿಷಯವನ್ನು ಶೀಘ್ರವಾಗಿ ಗ್ರಹಿಸುತ್ತಾರೆ. ಹಾಗಾಗಿ ಮಕ್ಕಳಿಗೆ ಉತ್ತಮ ಸಂಸ್ಕಾರಗಳ ಬಗ್ಗೆ ಕಲಿಸಬೇಕು. ವಿದ್ಯುತ್ ಉಳಿತಾಯ, ನೀರಿನ ಮಿತ ಬಳಕೆ, ಸ್ವಚ್ಛತೆಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು~ ಎಂದರು.

ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಮಕ್ಕಳ ಕೂಟ ನಿರ್ಮಿಸಿದೆ. ಮಕ್ಕಳಲ್ಲಿನ ಪ್ರತಿಭೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೇಸಿಗೆ ಶಿಬಿರ ಆಯೋಜಿಸುತ್ತಿದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೂ ಬೇಸಿಗೆ ಶಿಬಿರದಲ್ಲಿ ಅವಕಾಶ ನೀಡುವುದು ಉತ್ತಮಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಖಿಲ ಕರ್ನಾಟಕ ಮಕ್ಕಳ ಕೂಟದ ಅಧ್ಯಕ್ಷ ಟಿ.ವಿ. ಮಾರುತಿ, ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಬಿ.ಜಿ. ರಂಗನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.